ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಸಾವು- ದೇಹ ಛೀದ್ರ ಛೀದ್ರ
ಮೈಸೂರು: ಅಜ್ಜಿ (Grand Mother) ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ (Tractor) ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು (Nanjangud) ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.
ಭವಿಷ್ (8) ದಾರುಣವಾಗಿ ಸಾವನ್ನಪ್ಪಿದ್ದಾನೆ. ಟ್ರ‍್ಯಾಕ್ಟರ್ ರೊಟಾವೆಲ್ಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರವಾಗಿ ಹೊಲದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್ ಆರೋಪ
ಚಾಮರಾಜನಗರಕ್ಕೆ ವಿವಾಹವಾಗಿದ್ದ ತಾಯಿ ಮಮತಾ, ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಈ ವೇಳೆ ಭವಿಷ್ ತನ್ನ ಸೋದರಮಾವನ ಜೊತೆ ಟ್ರ‍್ಯಾಕ್ಟರ್ ನಲ್ಲಿ ಜಮೀನಿಗೆ ತೆರಳಿದ್ದ. ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಭವಿಷ್ ಟ್ರ‍್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದಾನೆ ಬಳಿಕ ರೊಟಾವೆಲ್ಟರ್‌ಗೆ ಸಿಲುಕಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್ ಆರೋಪ
ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತೀರ್ಥಯಾತ್ರೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬಸ್ ಬೆಂಕಿಗಾಹುತಿ – 9 ಮಂದಿ ಸಜೀವ ದಹನ!
