Crime NewsLatestಕೊಪ್ಪಳ-Koppalaರಾಜ್ಯ-Karnataka

ಗಂಗಾವತಿಯಲ್ಲಿ ಜೈ ಶ್ರೀರಾಮ್ ಘೋಷಣೇ ಕೂಗಿದ ವ್ಯಕ್ತಿ ಮೆಲೆ ಹಲ್ಲೆ

ಕೊಪ್ಪಳ: ಗಾಂಗಾವತಿಯ (Gangavati) ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ (Jai Sriram ) ಘೋಷಣೇ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದು ಮುಸ್ಲಿಂ (Muslim) ಯುವಕರ ಗುಂಪು ಹಲ್ಲೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಪಟ್ಟಣದಲ್ಲಿ ಎಸ್ಪಿ (SP) ಪ್ರತಿಕ್ರಿಯಿಸಿದ್ದಾರೆ.

ಪಟ್ಟಣಧ ಎಸ್ಪಿ ಯಶೋಧಾ ವಂಟಗೋಡಿ ಪ್ರತಿಕ್ರಿಯಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆಯಾಗಿದೆ ಎಂದು ಹಲ್ಲೆಗೊಳಗಾದ ವ್ಯಕ್ತಿ ಹೇಳುತ್ತಿದ್ದಾನೆ. ಆದರೆ, ಈ ಬಗ್ಗೆ ಇನ್ನೂ ದೂರು ದಾಖಲಾಗಿಲ್ಲ. ಅವರು ಏನು ದೂರು ಕೊಡುತ್ತಾರೆಯೋ ಆ ದೂರನ್ನು ಸ್ವೀಕರಿಸುತ್ತೇವೆ. ಘಟನೆ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಸದ್ಯದ ತನಿಖೆಯಲ್ಲಿ, ಜೈ ಶ್ರೀರಾಮ್ ಘೋಷಣೆ ಕೂಗಿದ್ದ ಕಾರಣಕ್ಕೇ ಹಲ್ಲೆ ನಡೆದಿದೆ ಎನ್ನಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏಪ್ರಿಲ್ 28 ಕ್ಕೆ ಪ್ರಧಾನಿ ಮೋದಿ ಶಿರಸಿಗೆ

ಹಲ್ಲೆಗೊಳಗಾದ ವ್ಯಕ್ತಿಯ ಹೇಳಿಕೆಯನ್ನು ನಾವು ಅಲ್ಲಗಳೆಯುತ್ತಿಲ್ಲ. ಬಾರ್ ಸಿಸಿಟಿವಿ ಪರಿಶೀಲನೆ ಮಾಡಿದ್ದೇವೆ. ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ನಂತರವೇ ಸತ್ಯಾಸತ್ಯತೆ ಗೊತ್ತಾಗಲಿದೆ. ಹಲ್ಲೆ ಮಾಡಿದವರು, ಹಲ್ಲೆಗೊಳಗಾದ ವ್ಯಕ್ತಿ ಪರಿಚಿತರೇ ಆಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡಾ. ರಾಜ್ ಹುಟ್ಟುಹಬ್ಬ- ಸ್ಮಾರಕಕ್ಕೆ ಪುಜೆ ಸಲ್ಲಿಸಿದ ಕುಟುಂಬಸ್ಥರು

https://youtu.be/sLATI2o90I0?si=sQpWsDdxsGDHQcxC

ಎಸ್ಪಿ ನೀಡಿರುವ ಈ ಹೇಳಿಕೆ ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಘಟನೆ ಸಂಬಂಧ ಈವರೆಗೂ ದೂರು ದಾಖಲಾಗಿಲ್ಲ. ಆದಾಗ್ಯೂ ಘೋಷಣೆ ಕೂಗಿದ್ದಕ್ಕೇ ಹಲ್ಲೆ ನಡೆದಿದೆ ಎಂದು ಹೇಳಲಾಗದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ

ಹಲ್ಲೆಗೊಳಗಾಗಿ ಗಾಯಗೊಂಡಿರುವ ಕುಮಾರ್ ರಾಠೋಡ್ ಎಂಬವರನ್ನು ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಪ್ರಚಾರ ರದ್ದು

Share with Friends
author avatar
News Desk