LatestTop Storiesಕೃಷಿ-Agricultureಜಿಲ್ಲಾ ಸುದ್ದಿಗಳು | District Newsಯಾದಗಿರಿ

ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದ ಬೃಹತ್ ಪ್ರತಿಭಟನೆ…

ಯಾದಗಿರಿ,ಸೆ15 : ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಬರ ಘೋಷಣೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆದಿದೆ. ಸುರಪುರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಿಂದ ಬಸವೇಶ್ವರ ವೃತ್ತದವರೆಗೆ ಬಿಜೆಪಿ ಮುಖಂಡ ಅಮೀನರಡ್ಡಿ ಯಾಳಗಿ ನೇತೃತ್ವದಲ್ಲಿ ರೈತರು ಪಾದಯಾತ್ರೆ ನಡೆಸಿದ್ದಾರೆ.

ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದ ಬೃಹತ್ ಪ್ರತಿಭಟನೆ

ಯಾಳಗಿ, ನಾಗನೂರು, ವಂದಗನೂರು, ಚಿಂಚೋಳಿ, ಅಲ್ಹಳ್ಳಿ, ಹೆಗ್ಗನದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಿಂದ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಳೆ ಕೊರತೆಯಿಂದ ಬಿತ್ತನೆ ಮಾಡಿದ ಬೆಳೆಗಳು ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸುರಪುರ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಿ, ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು ಶಹಾಪುರ ಮತಕ್ಷೇತ್ರದ ಹಿರಿಯ ಶಾಸಕ ಶರಣಬಸಪ್ಪ ದರ್ಶನಾಪುರ್ ಪರ್ಸೆಂಟೇಜ್ ದರ್ಶನಾಪುರ್ ಆಗಿದ್ದಾರೆ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡದೆ ಗುತ್ತಿಗೆದಾರಕ್ಕೆ ಮಾಡಿ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಅಮಿನರೆಡ್ಡಿ ಯಾಳಗಿ ಆಕ್ರೋಶ ಹೊರಹಾಕಿದ್ದಾರೆ.

ಬರ ಘೋಷಣೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ವಿಭೂತಿಹಳ್ಳಿ, ಚಂದ್ರಶೇಖರ ಸುಬೇದರ, ರಾಜೂಗೌಡ ಗೂಗಲ್, ಮಹೇಶ ಸುಬೇದರ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share with Friends
author avatar
Digital Desk