LatestTop Storiesಧಾರವಾಡ-Dharwad

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಜೀವವನ್ನೇ ಕಳೆದುಕೊಂಡ ವಿದ್ಯಾರ್ಥಿನಿ..

ಧಾರವಾಡ : ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ” ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ.
ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡವಳು.

ಮೇಘಾ ಧಾರವಾಡದ ಖಾಸಗಿ ಕಾಲೇಜೊಂದರಲ್ಲಿ ಡಿ.ಇಡಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ ಹೆಚ್ಚು ಮೊಬೈಲ್ ಬಳಕೆ ಮಾಡುತ್ತಾಳೆ, ರೀಲ್ಸ್ ನೋಡುತ್ತಾಳೆ ಎಂದು ಆಕೆಯ ತಾಯಿ ಮೇಘಾಗೆ ಬೈದು ಬುದ್ಧಿವಾದ ಹೇಳಿದ್ದಳು. ಇಷ್ಟಕ್ಕೇ ಮೇಘಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಗರಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದ ಬೆನ್ನಲ್ಲೇ ಪ್ರಿಯಕರನೂ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದ ತರುಣ್ ಸಾಗರ ಕುರಕುರಿ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಧಾರವಾಡದ ವಾಚ್ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ತರುಣ್, ನಗರದ ಪಿಜಿಯೊಂದರಲ್ಲಿ ಸ್ನೇಹಿತನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತರುಣ್‌ನ ಪ್ರೇಯಸಿ ಮೇಘಾ ಗುಬ್ಬನ್ನವರ (20) ನಿನ್ನೆ ಸಂಜೆ ಮನೆಯಲ್ಲಿ ಬೈದಿದ್ದಾರೆ ಎಂಬ ಕಾರಣಕ್ಕೆ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈ ಸಾವಿನ ಸುದ್ದಿ ತಿಳಿದ ಬಳಿಕ ತರುಣ್ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಕುರಿತು ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಘಟನೆ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Share with Friends
author avatar
Digital Desk