
ಕುರಿ ಕೊಂದ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ತೀವ್ರ ಜಗಳಆಗಿ ಓರ್ವ ಮಹಿಳೆ ಸಾವನಪ್ಪಿದ್ದಾಳೆ .
ಕೋಲಾರ ತಾಲೂಕಿನ ಪಚ್ಚಾರ್ಲಹಳ್ಳಿ ಗ್ರಾಮದಲ್ಲಿನಿನ್ನೆ ಕುರಿಯೊಂದು ಸಾವನ್ನಪ್ಪಿದ ಹಿನ್ನೆಲೆ, ವೆಂಕಟಲಕ್ಷ್ಮಮ್ಮ ಹಾಗೂ ಆಂಜಪ್ಪ ಕುಟುಂಬದ ನಡುವೆ ಜಗಳ ನಡೆದಿತ್ತು,
ಬಳಿಕ ಈ ವಿಚಾರವಾಗಿ ವೇಮಗಲ್ ಪೊಲೀಸ್ ಠಾಣೆಯಲ್ಲಿ ರಾಜಿ ಪಂಚಾತಿ ನಡೆದಿತ್ತು,ಈ ಮಧ್ಯೆ ದೂರು ನೀಡಿದ ಯುವಕ ಗಂಗರಾಜು ಎಂಬವರನ್ನು ಪೋಲೀಸರು ಥಳಿಸಿದ್ದಾರೆ ಎನ್ನಲಾಗಿದೆ,
ಆರೋಪಿಸಿ ಸಂತ್ರಸ್ತನನ್ನ ಎಸ್.ಎನ್.ಆರ್. ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ,ಇದೇ ಕಾರಣಕ್ಕೆ ನಿನ್ನೆ ರಾತ್ರಿ ಗ್ರಾಮದಲ್ಲಿ ಉಭಯ ಕುಟುಂಬಗಳ ನಡೆದ ಗಲಾಟೆ ವೇಳೆ ವೆಂಕಟಲಕ್ಷ್ಮಮ್ಮ ಮೃತಪಟ್ಟಿದ್ದು, ಅವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ,
ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಮೃದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ,
ಗ್ರಾಮದ ಆಂಜಪ್ಪ, ಮಂಜುನಾಥ್, ವೆಂಕಟೇಶ್ ಸೇರಿ ಹಲವರ ವಿರುದ್ಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ,
