LatestTop Stories

ಹುಬ್ಬಳ್ಳಿಯಲ್ಲಿ ಹಾಡು ಹಗಲೇ ಹರಿದ ನೆತ್ತರು – ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹಾಡು ಹಗಲೇ ಹರಿದ ನೆತ್ತರು..ಕೊಲೆ ಮಾಡಿದ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.ಹುಬ್ಬಳ್ಳಿಯ ಬನಶಂಕರಿ ಬಡಾವಣೆಯಲ್ಲಿ ಹಾಡು ಹಗಲೇ ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜರುಗಿದೆ.

ಇಬ್ಬರು ಯುವಕರು ಬೆನ್ನತ್ತಿ ಬಂದು ನಡು ರಸ್ತೆಯಲ್ಲೇ ತಲ್ವಾರಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಕೊಲೆಯಾದ ವ್ಯಕ್ತಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದನು ಎನ್ನಲಾಗಿದೆ

ಅದೇ ಸಿಟ್ಟಿನಿಂದ ಇನ್ನೊಂದು ಕಡೆಯವರು ಕೊಲೆ ಮಾಡಿರಬಹುದು ಎನ್ನಲಾಗಿದ್ದು, ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಎಸಿಪಿ ಶಿವಾನಂದ ಚಲವಾದಿ ಹಾಗೂ ಸಿಬ್ಬಂದಿ ಆಗಮಿಸಿ ತನಿಖೆ ನಡೆಸಿದ್ದಾರೆ.ಸ್ಥಳದಲ್ಲಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share with Friends
author avatar
Digital Desk