LatestTop Storiesಬೆಳಗಾವಿ-Belagavi

187 ಕೋಟಿ ರೂಪಾಯಿ ಹಗರಣದ ಆರೋಪ ..!

ಬೆಳಗಾವಿ : ಬೆಳಗಾವಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಅಹೋರಾತ್ರಿ ಸತ್ಯಾಗ್ರಹ ಮೂರನೇ ದಿನವೂ ಮುಂದುವರಿದಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿದ್ದು ಯಾವ ನ್ಯಾಯ?ತನಿಖೆ ಪೂರ್ಣಗೊಳ್ಳುವ ಮುನ್ನವೇ ಸಚಿವ ಸ್ಥಾನ ನೀಡುವ ಅಗತ್ಯವೇನಿತ್ತು?ಎಂಬ ಪ್ರಶ್ನೆಗಳನ್ನು ಬಿಜೆಪಿ ನಾಯಕರು ಸರ್ಕಾರದ ಮುಂದಿಟ್ಟಿದ್ದಾರೆ.ಸತ್ಯಾಗ್ರಹದಲ್ಲಿ ಮಾಜಿ ಶಾಸಕ ಸಂಜಯ್ ಪಾಟೀಲ್, ಬಿಜೆಪಿ ಬೆಳಗಾವಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಎಂ.ಬಿ. ಜಿರಲಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಮಾಧ್ಯಮಗಳ ಮುಂದೆ ಮಾತನಾಡಿದ ಬಿಜೆಪಿ ನಾಯಕರು,
“ನಾವು ಮಾಡಿದ ಕರ್ಮಗಳನ್ನೇ ಜನರ ಮುಂದೆ ಹೇಳಿಕೊಂಡು, ಸರ್ಕಾರದ ವೈಫಲ್ಯವನ್ನು ಬಯಲು ಮಾಡುತ್ತಿದ್ದೇವೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಮತ್ತೆ ಅಧಿಕಾರ ನೀಡುವುದನ್ನು ಜನರು ಪ್ರಶ್ನಿಸಬೇಕು” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಾಗೇಂದ್ರ ಅವರ ರಾಜೀನಾಮೆ ಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.

Share with Friends
author avatar
Digital Desk