
ಬಂಗಾರಪೇಟೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಆರೋಪ – ಆರೋಪಿ ಅರೆಸ್ಟ್
ಕೋಲಾರ: ಬಂಗಾರಪೇಟೆಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಪ್ರಕರಣ ಸಂಬಂಧ ಬಂಗಾರಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರು ದಾಖಲಾದ ಒಂದು ಗಂಟೆಯೊಳಗೆ ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ರಾಘವೇಂದ್ರ (38), ಬಂಗಾರಪೇಟೆ ಬೋವಿನಗರ ನಿವಾಸಿ ಎಂದು ಗುರುತಿಸಲಾಗಿದೆ.
ಸೆ.2 ರಂದು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ ಕಾಯ್ದೆ-2012 ಅಡಿ ಪ್ರಕರಣ ದಾಖಲಿಸಲಾಗಿದೆ.ಸಂತ್ರಸ್ತ ಬಾಲಕಿ ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಾಲಕಿ ಕೋಲಾರದ SNR ಜಿಲ್ಲಾಸ್ಪತ್ರೆಗೆ ದಾಖಲು – ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಆರೋಪಿ ಬಂಧನದಲ್ಲಿ ಇನ್ಸ್‌ಪೆಕ್ಟರ್ ರವಿಕುಮಾರ್ ನೇತೃತ್ವದ ತಂಡ ಯಶಸ್ವಿಯಾಗಿದೆ.PSI ರಾಜಣ್ಣ, ಸಿಬ್ಬಂದಿ ಚಲಪತಿ, ಹರೀಶ್, ತಾಜ್ ಪಾಷಾ, ಮುನಿರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.SNR ಆಸ್ಪತ್ರೆ DS ಆದ ಮಹಮ್ಮದ್ ಶರೀಫ್ ಸ್ಪಷ್ಟನೆ – ಸದ್ಯ ಮಗುವಿಗೆ ಯಾವುದೇ ಪ್ರಾಣಾಪಾಯವಿಲ್ಲ, ಮಗುವಿನ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ, ಚೇತರಿಸಿಕೊಳ್ಳುತ್ತಿದೆ.
