LatestTop Storiesಮೈಸೂರು-Mysuru

ಅಕ್ರಮ ಸಂಬಂಧದ ಆರೋಪ: ಗೃಹಿಣಿ ಆತ್ಮಹತ್ಯೆ

ಮೈಸೂರು.ಸೆ.24-ಅಕ್ರಮ ಸಂಬಂಧದ ಆರೋಪ ಹಾಗೂ ಬ್ಲ್ಯಾಕ್‌ಮೇಲ್‌ನಿಂದ ಮನನೊಂದು ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಮೃತಳನ್ನು ಎಂ.ಆರ್. ಸಂಧ್ಯಾ ಎಂದು ಗುರುತಿಸಲಾಗಿದೆ. ಅದೇ ಗ್ರಾಮದ ವಿಕಾಸ್ ಎಂಬಾತನೊಂದಿಗೆ ಸಂಧ್ಯಾ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.ಮೊಬೈಲ್‌ನಲ್ಲಿ ಮೆಸೇಜ್‌ಗಳು ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸಂಧ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿಕಾಸ್, ಕುಮಾರ್ ಹಾಗೂ ವಸಂತ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಘಟನೆ ಬಳಿಕ ವಿಕಾಸ್ ಪರಾರಿಯಾಗಿದ್ದು, ಆತನಿಗಾಗಿ ಬಿಳಿಕೆರೆ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಆರೋಪಿಯನ್ನು ಬಂಧಿಸುವವರೆಗೆ ಶವಸಂಸ್ಕಾರ ನಡೆಸುವುದಿಲ್ಲ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಶವದ ಪಂಚನಾಮೆ ಪ್ರಕ್ರಿಯೆಗೂ ಗ್ರಾಮದ ಯಾರೊಬ್ಬರೂ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ.

ಪೊಲೀಸರು ಆರೋಪಿ ಬಂಧಿಸುವ ಭರವಸೆ ನೀಡಿದರೂ, ಕುಟುಂಬಸ್ಥರು ಇನ್ನೂ ಮರಣೋತ್ತರ ಪರೀಕ್ಷೆಗೆ ಶವವನ್ನು ಒಪ್ಪಿಸಲು ಸಮ್ಮತಿಸಿಲ್ಲ ಎಂದು ತಿಳಿದು ಬಂದಿದೆ.

Share with Friends
author avatar
Digital Desk