LatestTop Storiesಜಿಲ್ಲಾ ಸುದ್ದಿಗಳು | District Newsಯಾದಗಿರಿ

ಬರಗಾಲ ಘೋಷಣೆ ವಿಚಾರದಲ್ಲಿ ಉಸ್ತುವಾರಿ ಸಚಿವರ ವಿರುದ್ಧ ಸರ್ವ ಸಂಘಟನೆಗಳ ಆಕ್ರೋಶ

ಯಾದಗಿರಿ ಜಿಲ್ಲಾ ಕೆಡಿಪಿ ಸಭೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶರಣು ಪ್ರಕಾಶ್ ಪಾಟೀಲ್ ಅವರಿಗೆ ಬರಗಾಲ ಘೋಷಣೆ ಕುರಿತು ಸರ್ವ ಸಂಘಟನೆಗಳ ಹೋರಾಟ ಸಮಿತಿ ವತಿಯಿಂದ ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರದ ಮಟ್ಟದಲ್ಲಿ ಏನು ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದ ಹೋರಾಟ ಸಮಿತಿ:

ಸಚಿವ ಶರಣು ಪ್ರಕಾಶ್ ಪಾಟೀಲ್ “ನನ್ನ ವಿಧಾನಸಭಾ ಕ್ಷೇತ್ರವಾದ ಸೇಡಂ ಇನ್ನೂ ಬರಪೀಡಿತ ಎಂದು ಘೋಷಣೆಯಾಗಿಲ್ಲ; ಇನ್ನು ಯಾದಗಿರಿ ಎಲ್ಲಿಂದ ಆಗುತ್ತದೆ” ಎಂದು ಉತ್ತರಿಸಿದ್ದಾರೆ.

ಸಚಿವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸರ್ವ ಸಂಘಟನೆಗಳ ಹೋರಾಟಗಾರರ ಆಕ್ರೋಶ “ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರೂ ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ.

ಯಾವ ಪುರುಷಾರ್ಥಕ್ಕಾಗಿ ಬರಿಗೈಯಲ್ಲಿ ಬಂದು ಕೆಡಿಪಿ ಸಭೆ ನಡೆಸುತ್ತೀರಿ?” ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡರು ಯಾದಗಿರಿ ಜಿಲ್ಲೆಯ ಬರಪೀಡಿತ ಪ್ರದೇಶ ಘೋಷಣೆ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಆಗ್ರಹ

ಉಸ್ತುವಾರಿ ಸಚಿವರನ್ನು ತಕ್ಷಣವೇ ಬೇರೆ ಜಿಲ್ಲೆಗೆ ಬದಲಾವಣೆ ಮಾಡಿ, ಯಾದಗಿರಿ ಜಿಲ್ಲೆಯ ಸ್ಥಳೀಯ ಶಾಸಕರೊಬ್ಬರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹ

ಸೆಪ್ಟೆಂಬರ್ 17ರೊಳಗೆ ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಉಸ್ತುವಾರಿ ಸಚಿವರ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಹಾಗೂ ಪ್ರತ್ಯೇಕ ರಾಜ್ಯದ ಧ್ವಜ ಹಾರಿಸುವ ಎಚ್ಚರಿಕೆ ನೀಡಿದ ಸರ್ವ ಸಂಘಟನೆಗಳ ಹೋರಾಟ ಸಮಿತಿ ಬರ ಘೋಷಣೆಗಾಗಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ..!

Share with Friends
author avatar
Digital Desk