LatestTop Storiesಜಿಲ್ಲಾ ಸುದ್ದಿಗಳು | District Newsಬೆಳಗಾವಿ-Belagavi

SIR ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರು ಅಳಿಸುವ ಆರೋಪ..

ಬೆಳಗಾವಿ-ಸೆ.23 –ಬೆಳಗಾವಿಯಲ್ಲಿ SIR ಪ್ರಕ್ರಿಯೆ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.ನಗರದ ವೀರಭದ್ರನಗರದ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರು ಆಸ್ಪತ್ರೆಯ ಸಿಬ್ಬಂದಿಯನ್ನು ಬಳಸಿಕೊಂಡು, ತಾವು ಅಧಿಕಾರಿಗಳೆಂದು ಹೇಳಿಕೊಂಡು, 200ಕ್ಕೂ ಅಧಿಕ ಫಾರ್ಮ್ ನಂಬರ್ 7ಗಳಿಗೆ ಬಿಎಲ್‌ಒ ಅವರಿಂದ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

SIR ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರು ಅಳಿಸುವ ಆರೋಪ

ವಿಷಯ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಅಮನ್ ಸೇಠ್ ಸೇರಿದಂತೆ ಬಿಜೆಪಿ ಮುಖಂಡ ಮುರಗೇಂದ್ರಗೌಡ ಪಾಟೀಲ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಕುರಿತು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಶಿಗ್ಗಾವಿ ಅವರು ಮಾತನಾಡಿ, SIR ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನ ನಡೆಯಬಾರದು. ಒಂದು ನಿರ್ದಿಷ್ಟ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Share with Friends
author avatar
Digital Desk