BlogEntertainmentLatestTop Stories

ಪುಷ್ಪ-2 ಸಿನಿಮಾ ವೀಕ್ಷಣೆಗೆ ಬಂದಾಗ ಸಾವನ್ನಪ್ಪಿದ್ದ ಮಹಿಳೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಅಲ್ಲು ಅರ್ಜುನ್

ಹೈದರಾಬಾದ್ : ಗುರುವಾರ (ಡಿಸೆಂಬರ್ 5)ರಂದು ಅಲ್ಲು ಅರ್ಜುನ ಅಭಿನಯದ ‘ಪುಷ್ಪ 2’ ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಉಂಟಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು.

ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರು ರೇವತಿ ಸಾವಿನ ಕುರಿತು ಪ್ರತಿಕ್ರಿಯಿಸಿದ್ದಾರೆ. ಮೃತರ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ‘ನಾವು ಏನೇ ಮಾಡಿದರೇ ಈ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ನಿಮಗಾಗಿ ನಾವು ಇದ್ದೇವೆ. ರೇವತಿ ಅವರ ಕುಟುಂಬಕ್ಕೆ ನನ್ನ ಸಂತಾಪಗಳು.

ನನ್ನ ಪರವಾಗಿ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂಪಾಯಿ ನೀಡುತ್ತಿದ್ದೇವೆ. ವೈದ್ಯಕೀಯ ಖರ್ಚನ್ನು ನಾವೇ ನೀಡುತ್ತೇವೆ. ನಮ್ಮ ತಂಡದಿಂದ ಯಾವುದೇ ಸಹಾಯವನ್ನು ನೀಡಲು ನಾವು ಸಿದ್ಧರಿದ್ದೇವೆ. ಅವರಿಗೆ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಶೀಘ್ರದಲ್ಲೇ ರೇವತಿ ಕುಟುಂಬವನ್ನು ಖುದ್ದಾಗಿ ಭೇಟಿ ಮಾಡುತ್ತೇವೆ’ ಎಂದು ಅಲ್ಲೂ ಅರ್ಜುನ್ ಹೇಳಿದ್ದಾರೆ.

ಹೈದರಾಬಾದ್​ನ ಐಕಾನಿಕ್ ಥಿಯೇಟರ್​ಗಳಲ್ಲಿ ಒಂದಾದ ‘ಸಂಧ್ಯಾ’ದಲ್ಲೂ ಈ ಸಿನಿಮಾ ಶೋ ಆಯೋಜನೆ ಮಾಡಲಾಗಿತ್ತು. ಸಿನಿಮಾ ವೀಕ್ಷಣೆಗೆ ಅಲ್ಲು ಅರ್ಜುನ್ ಕೂಡ ಬರಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ಥಿಯೇಟರ್​ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ಲ. ಈ ವೇಳೆ ಅವಘಡ ಸಂಭವಿಸಿತ್ತು.

Share with Friends
author avatar
News Desk