BlogLatestರಾಜಕೀಯ | Politicsರಾಜ್ಯ-Karnataka

ಸಿದ್ದರಾಮಯ್ಯನವರಿಗೆ ನಾನು ಹೆದರಲು ಅವರೇನು ದೆವ್ವನಾ..? : ಕುಮಾರಸ್ವಾಮಿ

ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆವ್ವ ಆಗಿದ್ದರೆ ಭಯ ಪಡಬೇಕು. ದೆವ್ವ ಅಲ್ಲ ಅಲ್ವಾ? ಹಾಗಿದ್ದರೆ ನಾನು ಯಾಕೆ ಭಯಪಡಲಿ ಎಂದು ಟಾಂಗ್ ಕೊಟ್ಟರು.

ಕುಮಾರಸ್ವಾಮಿಯನ್ನು ಯಾವುದೇ ಕಾರಣಕ್ಕೂ ಹೆದರಿಸಲು ಆಗಲ್ಲ. ನಾನು ಯಾರಿಗೂ ಹೆದರಲ್ಲ ಎಂದರು.ಸಿದ್ದರಾಮಯ್ಯನಂತಹ ಲಕ್ಷ ಜನ ಬರಲಿ ಹೆದರಲ್ಲ. ಜನರಿಗೆ ಮಾತ್ರ ಹೆದರುತ್ತೇನೆ, ಸಿದ್ದರಾಮಯ್ಯ ಅವರಿಗೆ ಹೆದರುತ್ತೀನಾ? ನಾನು ರಾಜಕೀಯಕ್ಕೆ ಸಿದ್ದರಾಮಯ್ಯ ನೆರಳಲ್ಲಿ ಬಂದಿದ್ದೀನಾ? ಸ್ವಂತ ದುಡಿಮೆ, ಕಾರ್ಯಕರ್ತರ ದುಡಿಮೆ ಮೇಲೆ ಬಂದಿದ್ದೇನೆ.

ಸಿದ್ದರಾಮಯ್ಯ ಹೆಸರಲ್ಲಿ ನಾನು ರಾಜಕೀಯ ಮಾಡಿಲ್ಲ. ಹಾಗೆ ನೋಡಿದರೆ ಸಿದ್ದರಾಮಯ್ಯ ನನ್ನ ಪಕ್ಷದ ಕಾರ್ಯಕರ್ತ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನೆರಳಲ್ಲಿ ಸಿದ್ದರಾಮಯ್ಯ ಬಂದಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಮುಡಾ ವಿಚಾರ ಡೈವರ್ಟ್ ಮಾಡಲು ನಿಮ್ಮ ವಿರುದ್ಧ ಎಫ್ಐಆರ್ ಹಾಕಲಾಗಿದೀಯಾ ಎಂಬ ವಿಚಾರವಾಗಿ ಮಾತಾನಡಿದ ಹೆಚ್ಡಿ ಕುಮಾರಸ್ವಾಮಿ, ಪ್ರತಿಯೊಂದು ವಿಷಯ ಡೈವರ್ಟ್ ಮಾಡಲಿಕ್ಕೆ ನೋಡುತ್ತಿದ್ದಾರೆ. ಈ ಸರ್ಕಾರ ಎಲ್ಲವನ್ನು ಬಿಟ್ಟಿರುವ ಸರ್ಕಾರ. ಯಾವ ಭಯ ಭಕ್ತಿಯೂ ಇಲ್ಲ, ಗೌರವವೂ ಇಲ್ಲ. ಇದು ಬಂಡ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share with Friends
author avatar
News Desk