BlogLatestTop Storiesರಾಜ್ಯ-Karnataka

ತಿರುಪತಿ ಲಡ್ಡು ವಿವಾದ : ಎಚ್ಚೆತ್ತ ರಾಜ್ಯ ಸರ್ಕಾರ, ದೇವಸ್ಥಾನಗಳಲ್ಲಿ ಕೇವಲ ನಂದಿನಿ ತುಪ್ಪ ಬಳಕೆಗೆ ಆದೇಶ

ಬೆಂಗಳೂರು: ತಿರುಪತಿ ಲಡ್ಡು ವಿವಾದ ಬುಗಿಲ್ಲೆದ್ದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಎಚ್ಛೆತ್ತುಕೊಂಡಿದ್ದು, ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.

ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಮಲ ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವಾದ ಲಡ್ಡುವಿನ ತಯಾರಿಕೆಗೆ ಕಳಪೆ ಗುಣಮಟ್ಟದ ವಸ್ತುಗಳು, ದನದ ಕೊಬ್ಬು ಹಾಗೂ ಮೀನಿನೆಣ್ಣೆ ಇರುವ ತುಪ್ಪವನ್ನು ಬಳಸಲಾಗಿತ್ತು ಎಂಬುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ. ಈ ವಿಚಾರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಮಾತ್ರವಲ್ಲದೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.

Share with Friends
author avatar
News Desk