BlogLatestTop Storiesರಾಜ್ಯ-Karnataka

ಮತ್ತೆ 5 ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆ

ಬೆಂಗಳೂರು : ಇಂದಿನಿಂದ ಮತ್ತೆ 5 ದಿನ ಮತ್ತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದಿನಿಂದ ಆಗಸ್ಟ್ 22ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇಂದು ಹಾಗೂ ನಾಳೆ ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆ.20, 21ರಂದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಮತ್ತು ನಾಳೆ ದಕ್ಷಿಣ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು 5 ದಿನ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ವಾರದಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಳ್ಳೆ ಮಳೆಯಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಆ.19ರವರೆಗೂ ಮಳೆಯಾಗಲಿದೆ. ಕೆಲವೆಡೆ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಮಳೆ ಕಡಿಮೆಯಾಗಲಿದೆ.

Share with Friends
author avatar
News Desk