Crime NewsLatestಧಾರವಾಡ-Dharwadರಾಜ್ಯ-Karnataka

ಹುಬ್ಬಳ್ಳಿಯಲ್ಲಿ ನೇಹಾ ಮಾದರಿಯ ಮತ್ತೊಂದು ಕೊಲೆ – ನೇಹಾ ಮಾದರಿಯಲ್ಲಿ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ

ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremat) ಕೊಲೆ ಕಹಿ ನೆನಪು ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ (HUbbali) ಅದೇ ರೀತಿಯ ಮತ್ತೊಂದು ಕೊಲೆ (Murder) ನಡೆದಿದೆ. ನಿದ್ದೆ ಮಾಡುತ್ತಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಂಗೇರಿ ( Bengeri) ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ (Veerapuara) ಓಣಿ ಸಾಕ್ಷಿಯಾಗಿದೆ.

ಮೃತ ಯುವತಿಯನ್ನು ಅಂಜಲಿ ಅಂಬಿಗೇರ ಎಂದು ಗುರುತಿಸಲಾಗಿದೆ. ವಿಶ್ವ ಅಲಿಯಾಸ್ ಗಿರೀಶ್ ಎಂಬಾತ ಈ ಯುವತಿಯನ್ನು ಹತ್ಯೆ ಮಾಡಿದ್ದು, ನಂತರ ತಲೆಮರೆಸಿಕೊಂಡಿದ್ದಾನೆ. ಆರೋಪಿ ಈ ಮೊದಲು ನೇಹಾ ಮಾದರಿಯಲ್ಲಿ ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದಾನೆ. ಆದರಂತೆಯೇ ಬುಧವಾರ ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಆಕೆಯ ಅಜ್ಜಿ ಹಾಗೂ ಇಬ್ಬರು ಸಹೋದರಿಯರ ಮುಂದೆಯೇ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ- ಯೆಲ್ಲೋ ಅಲರ್ಟ್ ಜಾರಿ

https://youtu.be/am20I7-S2dU?si=cSC21b6qBC1m_d7N

ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಆದ ಹಾಗೆಯೇ ನಿನಗೂ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಮಳೆ ಅಬ್ಬರ- ಚಿಕ್ಕಬಳ್ಳಾಪುರದಲ್ಲಿ ಒಣಗುತ್ತಿದ್ದ ಬೆಳೆಗಳಿಗೆ ಜೀವಕಳೆ

https://youtu.be/lwT9p6w4n0U?si=vInwqOCk8_alsM-9

ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿರುವ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು. ಪರಿಣಾಮವಾಗಿ ಇದೀಗ ಮತ್ತೊಂದು ಕೊಲೆಯಾಗಿದೆ. ಇದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಇದನ್ನೂ ಓದಿ: ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?

Share with Friends
author avatar
News Desk