ರಾಜಕೀಯ | Politicsರಾಷ್ಟ್ರೀಯ-National

ಹುಬ್ಬಳ್ಳಿಯಲ್ಲಿ ರಣರಂಗವಾದ ‘ನೀಟ್’ ಹಗರಣ ವಿರೋಧಿ ಪ್ರತಿಭಟನೆ..!

​ಹುಬ್ಬಳ್ಳಿ: ದೇಶಾದ್ಯಂತ ಕೋಲಾಹಲ ಸೃಷ್ಟಿಸಿರುವ ನೀಟ್ (NEET) ಪರೀಕ್ಷೆ ಹಗರಣ ಖಂಡಿಸಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆಯಿತು.ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಯ ಎದುರಿನ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳು ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯಲ್ಲಿ ರಣರಂಗವಾದ ನೀಟ್ ಹಗರಣ ವಿರೋಧಿ ಪ್ರತಿಭಟನೆ

ಪ್ರತಿಭಟನೆಯು ರಣರಂಗದ ಸ್ವರೂಪ ಪಡೆದುಕೊಂಡಿದ್ದು, ಆಕ್ರೋಶಗೊಂಡ ವಿದ್ಯಾರ್ಥಿಗಳು ಟೈಯರ್‌ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು.ನೀಟ್ ಅಕ್ರಮಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು.

Share with Friends
author avatar
Digital Desk