EntertainmentLatestಸ್ಯಾಂಡಲ್​ವುಡ್-Sandalwood

ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಹೊಸ ಉದ್ಯಮದತ್ತ ಅಶ್ವಿನಿ

ಇಂದು ಅಣ್ಣಾವ್ರ 95 ನೇ ಹುಟ್ಟುಹಬ್ಬ ಪ್ರಯುಕ್ತ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ಈ ಕುರಿತು ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ (Social Media) ಮಾಹಿತಿ ನೀಡಿದ್ದಾರೆ.

ಅಪ್ಪಾಜಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಎಂದು ಅಣ್ಣಾವ್ರರನ್ನು ಅಶ್ವಿನಿ ಸ್ಮರಿಸಿದ್ದಾರೆ. ಇಂದು ಅಪ್ಪಾಜಿಯವರ 95ನೇ ಜನ್ಮದಿನಾಚರಣೆಯ ಅಂಗವಾಗಿ ಹಾಗೂ ಗಂಧದಗುಡಿ ಚಿತ್ರದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಶುಭಸುದ್ದಿ ತಿಳಿಸಿದ್ದಾರೆ. ಅಪ್ಪು ಅವರ ಗಂಧದಗುಡಿ ಅಗರಬತ್ತಿಯ ಶುಭಾರಂಭದೊಂದಿಗೆ ಸ್ಮರಿಸೋಣ ಎಂದು ಅಶ್ವಿನಿ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹರ್ಷಿಕಾ-ಭುವನ್ ಹಲ್ಲೆ ಪ್ರಕರಣ – ಪ್ರಹ್ಲಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ ದಂಪತಿ

Share with Friends
author avatar
News Desk