LatestTop Storiesಬೆಂಗಳೂರು-Bengaluru

ಮತ್ತೆ ಮುಷ್ಕರಕ್ಕೆ ಸಜ್ಜಾದ ಬ್ಯಾಂಕ್ ನೌಕರರು

ಬೆಂಗಳೂರು.ಸೆ.25- ವಾರಕ್ಕೆ ಐದು ದಿನ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ನೌಕರರು ಮತ್ತೊಮ್ಮೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸೆಪ್ಟೆಂಬರ್ ೨೮ರಿಂದ ೩೦ರವರೆಗೆ ದೇಶವ್ಯಾಪಿ ಮೂರು ದಿನಗಳ ಮುಷ್ಕರ ನಡೆಸಲು ನೌಕರರ ಸಂಘಟನೆಗಳು ನಿರ್ಧರಿಸಿವೆ.

ಮುಷ್ಕರದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೨೬ರಿಂದಲೇ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸೆ.೨೬ ನಾಲ್ಕನೇ ಶನಿವಾರ ಹಾಗೂ ಸೆ.೨೭ ಭಾನುವಾರವಾಗಿರುವುದರಿಂದ ಸತತ ಐದು ದಿನಗಳ ಕಾಲ ಬ್ಯಾಂಕ್ ಶಾಖೆಗಳ ಸಾಮಾನ್ಯ ಕಾರ್ಯಾಚರಣೆಗೆ ಅಡಚಣೆ ಉಂಟಾಗಲಿದೆ.

ಮತ್ತೆ ಮುಷ್ಕರಕ್ಕೆ ಸಜ್ಜಾದ ಬ್ಯಾಂಕ್ ನೌಕರರು

ವಾರಕ್ಕೆ ಐದು ದಿನ ಕೆಲಸ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಬ್ಯಾಂಕ್ ನೌಕರರು ಆಗ್ರಹಿಸಿದ್ದಾರೆ. ಬೇಡಿಕೆಗಳ ಕುರಿತು ಸರ್ಕಾರದಿಂದ ಸಮರ್ಪಕ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿರುವ ನೌಕರರು, ಹೋರಾಟ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಮುಷ್ಕರದ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಲ್ಲಿ ನೇರವಾಗಿ ನಡೆಸಬೇಕಾದ ವಹಿವಾಟುಗಳು ಮತ್ತು ಸೇವೆಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಆದರೆ ನೆಟ್ ಬ್ಯಾಂಕಿಂಗ್, ಯುಪಿಐ ಸೇರಿದಂತೆ ಆನ್‌ಲೈನ್ ಪಾವತಿ ಸೇವೆಗಳು ಸಾಮಾನ್ಯವಾಗಿ ಲಭ್ಯವಿರುವ ನಿರೀಕ್ಷೆಯಿದೆ.

ಈ ಹಿಂದೆ ಸೆಪ್ಟೆಂಬರ್ ೧೧ರಂದು ದೇಶವ್ಯಾಪಿ ಮುಷ್ಕರ ನಡೆಸಿದ್ದ ಬ್ಯಾಂಕ್ ನೌಕರರು, ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಇದೀಗ ಮತ್ತೊಂದು ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.

Share with Friends
author avatar
Digital Desk