LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ಬರಪೀಡಿತ ರೈತರಿಗೆ ಬಿಗ್ ರಿಲೀಫ್: ಸಾಲ ಮರುಪಾವತಿಗೆ 5 ವರ್ಷಗಳವರೆಗೆ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಬರಪೀಡಿತ 101 ತಾಲೂಕುಗಳ ರೈತರಿಗೆ ಬ್ಯಾಂಕ್‌ಗಳಿಂದ ವಿಶೇಷ ಸಾಲ ಪರಿಹಾರ ಯೋಜನೆ ಘೋಷಿಸಲಾಗಿದೆ.

ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ 12 ತಿಂಗಳ ಮೊರಟೋರಿಯಂ ನೀಡಲಾಗಿದ್ದು, ತೀವ್ರ ಬರಪೀಡಿತ ತಾಲೂಕುಗಳಲ್ಲಿ ಸಾಲ ಮರುಪಾವತಿ ಅವಧಿಯನ್ನು 60 ತಿಂಗಳು (5 ವರ್ಷ) ಹಾಗೂ ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ 36 ತಿಂಗಳು (3 ವರ್ಷ) ವಿಸ್ತರಿಸಲಾಗಿದೆ.

ಕಿಸಾನ್ ಕ್ರೆಡಿಟ್ ಕಾರ್ಡ್ (KCC), ಕೃಷಿ, ಹೈನುಗಾರಿಕೆ, ರೇಷ್ಮೆ ಮತ್ತು ಮೀನುಗಾರಿಕೆ ಸೇರಿದಂತೆ ಕೃಷಿ ಸಂಬಂಧಿತ ಸಾಲಗಳಿಗೆ ಈ ಸೌಲಭ್ಯ ಅನ್ವಯವಾಗಲಿದೆ.

ಇದರ ಜೊತೆಗೆ ರೈತರ ತುರ್ತು ಅಗತ್ಯಕ್ಕೆ ಅನುಗುಣವಾಗಿ ಹೊಸ ಸಾಲ ಸೌಲಭ್ಯ ನೀಡಲು ಬ್ಯಾಂಕ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ವರ್ಷ ರೈತರಿಂದ ಬಲವಂತದ ಸಾಲ ವಸೂಲಾತಿ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಹಕಾರ ವಲಯದ ಸಾಲ ಸೌಲಭ್ಯ: ಸಹಕಾರ ಬ್ಯಾಂಕುಗಳ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಸಂಬಂಧಿಸಿದಂತೆ ನಬಾರ್ಡ್ (NABARD) ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಚರ್ಚಿಸಿ ಶೀಘ್ರದಲ್ಲೇ ಸೂಕ್ತ ಪರಿಹಾರ ರೂಪಿಸಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share with Friends
author avatar
Digital Desk