EntertainmentLatestTop Storiesಬೆಂಗಳೂರು-Bengaluruಸ್ಯಾಂಡಲ್​ವುಡ್-Sandalwood

Big Boss ಗ್ರ್ಯಾಂಡ್ ಓಪನಿಂಗ್ ಡೇಟ್ ಬಗ್ಗೆ ಬಿಗ್ ಅಪ್ಡೇಟ್..

ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಎಂದೇ ಹೆಸರಾಗಿರುವ ಬಿಗ್ ಬಾಸ್ ಕನ್ನಡದ ನ್ಯೂ ಸೀಸನ್ ಯಾವಾಗ ಶುರು ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.

ಇದೇ ಸೆಪ್ಟೆಂಬರ್ 6 ರಿಂದ ಬಿಗ್ ಬಾಸ್ ಕನ್ನಡ ಸೀಸನ್ 13 ಅಧಿಕೃತವಾಗಿ ಆರಂಭವಾಗಲಿದೆ ಎಂದು ಖುದ್ದು ಕಿಚ್ಚ ಸುದೀಪ್ ಅವರು ತಿಳಿಸಿದ್ದಾರೆ. ಇದರೊಂದಿಗೆ, ದೊಡ್ಮನೆಯ ಹೊಸ ಆಟವನ್ನು ಕಣ್ಣುಂಬಿಕೊಳ್ಳಲು ಇಡೀ ಕರ್ನಾಟಕವೇ ಕಾಯುತ್ತಿದೆ.

Big Boss ಗ್ರ್ಯಾಂಡ್ ಓಪನಿಂಗ್ ಡೇಟ್ ಬಗ್ಗೆ ಬಿಗ್ ಅಪ್ಡೇಟ್

ಕನ್ನಡ ಚಿತ್ರರಂಗದ ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ಶೋ ಊಹಿಸಿಕೊಳ್ಳುಲೂ ಸಾಧ್ಯವಿಲ್ಲ . ಈ ಬಾರಿಯೂ ಸುದೀಪ್ ಅವರೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ಹೊಸ ಪ್ರೋಮೋದಲ್ಲಿ ಸುದೀಪ್ ಅವರು ವಿಮಾನದ ಪೈಲಟ್ ರೂಪದಲ್ಲಿ ಕಾಣಿಸಿಕೊಂಡು ವೀಕ್ಷಕರಲ್ಲಿ ರೋಮಾಂಚನ ಉಂಟುಮಾಡಿದ್ದಾರೆ.

ಒಮ್ಮೆ ವಿಮಾನ ಟೇಕಾಫ್ ಆದರೆ ಹೊರಗಿನ ಜಗತ್ತಿನ ನೆಟ್‌ವರ್ಕ್ ಕಟ್ ಆಗುತ್ತದೆ ಮತ್ತು ನಿಮ್ಮ ನಿಜವಾದ ಬಣ್ಣ ಬಯಲಾಗುತ್ತದೆ ಎಂದು ಸುದೀಪ್ ಸ್ಪರ್ಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದೇ ಪ್ರೋಮೋದಲ್ಲಿ, ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ ಸೀಸನ್ 13 ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಚಾಲನೆ ಪಡೆಯಲಿದೆ ಎಂದು ಸುದೀಪ್ ತಿಳಿಸಿದ್ದಾರೆ.

ಸೆಪ್ಟೆಂಬರ್ 6 ರ ಸಂಜೆ 7 ಗಂಟೆಗೆ ಸರಿಯಾಗಿ ಗ್ರ್ಯಾಂಡ್ ಓಪನಿಂಗ್ ಸಂಚಿಕೆಯು ಪ್ರಸಾರವಾಗಲಿದ್ದು, ಸುದೀಪ್ ಅವರು ಎಲ್ಲಾ ಸ್ಪರ್ಧಿಗಳನ್ನು ಮನೆಗೆ ಬರಮಾಡಿಕೊಳ್ಳಲಿದ್ದಾರೆ.

Share with Friends
author avatar
Digital Desk