Latestಮೈಸೂರು-Mysuruರಾಜಕೀಯ | Politicsರಾಜ್ಯ-Karnataka

ಬಿಜೆಪಿ ಸಂಸದ ವಿ.ಶ್ರೀನಿವಾಸ್ ನಿಧಾನ

ಮೈಸೂರು: ಚಾಮರಾಜನಗರ (Chamrajanagar) ಕ್ಷೇತ್ರದ ಸಂಸದ ಮೈಸೂರು-ಚಾಮರಾಜನಗರ (Mysuru-Chamarajanagar) ಭಾಗದ ಪ್ರಭಾವಿ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ (Srinivas Prasad) ನಿಧಾನರಾಗಿದ್ದಾರೆ.

ಕಳೆದ ಕೆಲ ದಿನಗಳಗಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ನಸುಕಿನ ಜಾವ 1.27 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆಸಿದ್ದಾರೆ. ಇದನ್ನೂ ಓದಿ: ನೇಹಾ ಹಿರೇಮಠ ಕೊಲೆ ಪ್ರಕರಣ: ಫಯಾಜ್ DNA ಪರೀಕ್ಷೆ ಮಾಡಲು ಮುಂದಾದ CID

ಶ್ರೀನಿವಾಸ ಪ್ರಸಾದ್ ಅವರು ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದರು. ಅವರು ಕಳೆದ ತಿಂಗಳಷ್ಟೇ ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಅವರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ದೇವರ ಮೊರೆ ಹೋದ ಶಿಲ್ಪಾ ಶೆಟ್ಟಿ

https://youtu.be/BNwwXuWwJxU?si=9KUcSjDP0s2Y85_4
Share with Friends
author avatar
News Desk