Latestರಾಜಕೀಯ | Politics

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಬಿಜೆಪಿ ತಯಾರಿ

ಬೆಂಗಳೂರು: ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಬಿಜೆಪಿ ಮತ್ತೊಂದು ಬೃಹತ್ ಪಾದಯಾತ್ರೆ ನಡೆಸಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ನಾಗೇಂದ್ರ ರಾಜೀನಾಮೆ ಸೇರಿದಂತೆ ಮೂರು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುವ ಕುರಿತು ಬಿಜೆಪಿ ನಾಯಕರು ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸುವ ಸಾಧ್ಯತೆ ಇದ್ದು, ಆಗಸ್ಟ್‌ 23ರಿಂದ ಹೋರಾಟ ಆರಂಭಿಸುವ ಬಗ್ಗೆ ಕೇಸರಿ ಪಡೆ ಚಿಂತನೆ ನಡೆಸಿದೆ ಎನ್ನಲಾಗಿದೆ.

ಈ ಕುರಿತು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಪಾದಯಾತ್ರೆಯ ಮಾರ್ಗ, ದಿನಾಂಕ ಹಾಗೂ ಪ್ರಮುಖ ಬೇಡಿಕೆಗಳ ಕುರಿತು ಬಿಜೆಪಿ ನಾಯಕರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುವುದರ ಜೊತೆಗೆ ಇನ್ನೆರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ ಸಜ್ಜಾಗುತ್ತಿದೆ ಎನ್ನಲಾಗಿದೆ. ಪಾದಯಾತ್ರೆಯ ಅಂತಿಮ ರೂಪುರೇಷೆ ಶೀಘ್ರದಲ್ಲೇ ಪ್ರಕಟವಾಗುವ ಸಾಧ್ಯತೆ ಇದೆ.

Share with Friends
author avatar
News Desk