
ವಂದೇ ಮಾತರಂಗೆ ಅಗೌರವ ಆರೋಪ – ಸೋನಿಯಾ, ರಾಹುಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
ರಾಯಚೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ರಾಯಚೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ವಂದೇ ಮಾತರಂ ಗೀತೆಗೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು. ಆಗಸ್ಟ್ 15ರಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆಅವರು ಧ್ವಜಾರೋಹಣ ನೆರವೇರಿಸಿದ ಸಂದರ್ಭದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಯುವ ಮೋರ್ಚಾ ಕಾರ್ಯಕರ್ತರು ಸೋನಿಯಾ–ರಾಹುಲ್ ವಿರುದ್ಧ ಧಿಕ್ಕಾರ ಕೂಗಿದರು. ಕಾಂಗ್ರೆಸ್ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರು, ದೇಶಭಕ್ತಿ ಗೀತೆಗೆ ಗೌರವ ನೀಡದ ನಾಯಕರು ದೇಶವಿರೋಧಿಗಳು. ಸ್ವಾತಂತ್ರ್ಯ ದಿನದಂದೇ ರಾಷ್ಟ್ರಗೀತೆಗೆ ಅವಮಾನ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದರು.ರಾಷ್ಟ್ರೀಯತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನೂರಾರು ಯುವ ಮೋರ್ಚಾ ಕಾರ್ಯಕರ್ತರು ಭಾಗವಹಿಸಿದ್ದರು.
