Crime NewsLatestರಾಷ್ಟ್ರೀಯ-National

ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಯಾವ ಶಾಲೆ?

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ (Delhi) ಪಬ್ಲಿಕ್ ಶಾಲೆಗೆ (School) ಬಾಂಬ್ (Bomb) ಬೆದರಿಕೆ ಹಾಕಲಾಗಿದೆ.

ಈ ಸಂಬoಧ ದೆಹಲಿ ಪೊಲೀಸರು ಪ್ರತಿಕ್ರಿಯಿಸಿ, ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿದ್ದು, ಶೋಧಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

https://youtu.be/Be99yrIDWss?si=nrhePkU2AwUiKbGz

ಬಾಂಬ್ ಬೆದರಿಕೆ ಹಿನ್ನೆಲೆ ದೆಹಲಿ ಪೊಲೀಸ್ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿದ್ದು, ಶಾಲಾ ಆವರಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಬಾಂಬ್ ನಿಷ್ಕ್ರಿಯ ತಂಡ ಶಾಲೆಯ ಸಂಪೂರ್ಣ ತಪಾಸಣೆ ನಡೆಸುತ್ತಿದೆ. ಇದನ್ನೂ ಓದಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ

https://youtu.be/yWADKMY19mU?si=3kdwPREMq8SLz-Lr

ಮತ್ತೊಂದು ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೂರ್ವ ಮಯೂರ್ ವಿಹಾರ್ ನಲ್ಲಿರುವ ಮದರ್ ಮೇರಿ ಶಾಲೆಗೂ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇಡೀ ಶಾಲೆಯನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಈವರೆಗೂ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ: ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

https://youtu.be/dWLffZROXAM?si=rMOkC8WSfXUWxBf3

.

Share with Friends
author avatar
News Desk