ಮುಂದುವರಿದ ಬಾಂಬ್ ಬೆದರಿಕೆಗಳು -ಇಂಡಿಗೋ ವಿಮಾನಕ್ಕೆ ಮತ್ತೆ ಬೆದರಿಕೆ
ನವದೆಹಲಿ: ಚೆನ್ನೈನಿಂದ (Chennai) ಮುಂಬೈಗೆ (Mumbai) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo Flight) ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ.
ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, , ಮುಂಬೈನಲ್ಲಿ ಇಳಿದ ನಂತರ ವಿಮಾನ ಸಿಬ್ಬಂದಿ ಪ್ರೊಟೋಕಾಲ್ ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕಗೊಳಿಸಲಾಯಿತು. ಇದನ್ನೂ ಓದಿ: ನಾಳೆಯಿಂದ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಪ್ರಸ್ತುತ ವಿಮಾನವು ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: ದೇಶದಲ್ಲಿ ಮೋದಿ ಅಲೆ ಇದೆ – ಮತದಾನದ ಬಳಿಕ ಕಂಗನಾ ಪ್ರತಿಕ್ರಿಯೆ
ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಎರಡನೇ ಘಟನೆಯಾಗಿದೆ. ಈ ಹಿಂದೆ ಮೇ 28 ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನಕ್ಕೆ ಇದೇ ರೀತಿಯ ಬೆದರಿಕೆ ಬಂದಿತ್ತು. ಬೆದರಿಕೆಯ ನಂತರ ವಿಮಾನದಲ್ಲಿದ್ದ ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ನಿರ್ಗಮನದ ಮೂಲಕ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು
ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ಸ್ಥಳಾಂತರಿಸುವಿಕೆಯನ್ನು 90 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತಮ್ಮ ಯಾವುದೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬಾರದು. ದೆಹಲಿ ಘಟನೆಯಲ್ಲಿ ಸುರಕ್ಷತಾ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಇಂಡಿಗೋ ಇಬ್ಬರು ಪೈಲಟ್‌ಗಳು ಮತ್ತು ನಾಲ್ವರು ಕ್ಯಾಬಿನ್ ಸದಸ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಇದನ್ನೂ ಓದಿ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ – ಇಬ್ಬರು ಸಾವು
