Crime NewsLatestTop Storiesರಾಷ್ಟ್ರೀಯ-National

ಬೆಳ್ಳಂಬೆಳಗ್ಗೆ ಹಾಲಿನ ಟ್ಯಾಂಕರ್‌ಗೆ ಬಸ್‌ ಡಿಕ್ಕಿ- 18 ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಲಕ್ನೋ: ಬೆಳ್ಳಂಬೆಳಗ್ಗೆ ದೆಹಲಿಗೆ ತೆರಳುತ್ತಿದ್ದ ಡಬಲ್‌ ಡೆಕ್ಕರ್‌ ಬಸ್‌ (Double Decker Bus0 ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು 18 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ (Lucknow Agra Expressway) ನಡೆದಿದೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಮಾಹಿತಿ ಪಡೆದು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು (UP Police) ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬಳಿಕ ಚಿಕಿತ್ಸೆಗಾಗಿ ಬಂಗಾರ್‌ಮೌನ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ಪ್ರಾಥಮಿಕ ಮೂಲಗಳು ತಿಳಿಸಿವೆ.

https://youtu.be/KYJE8fRBzQE?si=sDRal-BVYNhHt6kC

ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದರು. ಇದನ್ನೂ ಓದಿ: ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ ವಿಧಿವಶ

ಈ ಕುರಿತು ಮಾಹಿತಿ ನೀಡಿರುವ ಉನ್ನಾವೋ ಮ್ಯಾಜಿಸ್ಟ್ರೇಟ್‌ ಗೌರಂಗ್‌ ರಾಠಿ, ಬುಧವಾರ (ಇಂದು) ಮುಂಜಾನೆ 5:15ರ ಸುಮಾರಿಗೆ ಬಿಹಾರದ ಮೋತಿಹಾರಿಯಿಂದ ಬರುತ್ತಿದ್ದ ಡಬಲ್‌ ಡೆಕ್ಕರ್‌ ಖಾಸಗಿ ಬಸ್, ಹಾಲಿನ ಟ್ಯಾಂಕರ್‌ಗೆ (Milk Tanker) ಡಿಕ್ಕಿ ಹೊಡೆದಿದೆ. ಇದರಿಂದ 18 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸುಮಾರು 20ಕ್ಕೂ ಮಂದಿ ಗಾಯಗೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಸ್‌ನ ಅತಿವೇಗದ ಚಾಲನೆಯೇ ಕಾರಣವಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಮಾಜಿ ಸಚಿವ ನಾಗೇಂದ್ರ ವಶಕ್ಕೆ

https://youtu.be/jwlnFvv71rk?si=37zGzoyGz1Z9hS9r

ಸಮೀಪದ ಗರ್ಹಾ ಗ್ರಾಮದ ನಿವಾಸಿಗಳು ಸಿಒ ಅರವಿಂದ್ ಚೌರಾಸಿಯಾ ನೇತೃತ್ವದ ಪೊಲೀಸ್ ತಂಡಕ್ಕೆ ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಿದ್ದಾರೆ. ಘಟನೆ ಕಂಡು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್; ನಾಗೇಂದ್ರ, ದದ್ದಲ್ ಮನೆ ಮೇಲೆ ಇಡಿ ದಾಳಿ

Share with Friends
author avatar
News Desk