LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು ಗ್ರಾಮಾಂತರ

ಕಂದಕಕ್ಕೆ ಉರುಳಿದ ಬಸ್ -12 ಮಂದಿಗೆ ಗಾಯ

ಕುಮಟಾ.ಅ.1- ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ೧೨ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿ ಹಳ್ಳ ಸಮೀಪ ನಡೆದಿದೆ.

ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದೇವಿಮನೆ ಘಟ್ಟದ ಮಾಸ್ತಿ ಹಳ್ಳ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಮಟಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share with Friends
author avatar
Digital Desk