LatestTop Storiesರಾಜಕೀಯ | Politicsರಾಜ್ಯ-Karnataka

ದೆಹಲಿಗೆ ತೆರಳಿದ ಜಮೀರ್; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಬೆಂಗಳೂರು,ಜು.29: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ದೆಹಲಿಗೆ ತೆರಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಜಮೀರ್ ದೆಹಲಿಗೆ ತೆರಳಿದ್ದು,ರಣದೀಪ್ ಸುರ್ಜೇವಾಲ ಜೊತೆ ಚರ್ಚೆ ನಡೆಸಲಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯರ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್,ಈ ಬಾರಿಯೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಆದರೆ, ಅಲ್ಪಸಂಖ್ಯಾತ ಸಮುದಾಯದಿಂದಲೂ ಎನ್.ಎ. ಹ್ಯಾರಿಸ್, ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ತನ್ವೀರ್ ಸೇಠ್ ಅವರಂತಹ ಹಲವು ನಾಯಕರು ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ.

ದಾವಣಗೆರೆ ಘಟನೆಗೆ ಕ್ಷಮೆ ಯಾಚಿಸಿರುವ ಜಮೀರ್, ಹೈಕಮಾಂಡ್ ಮಟ್ಟದಲ್ಲಿ ತಮ್ಮ ಪ್ರಭಾವ ಬಳಸಲು ಪ್ರಯತ್ನಿಸುತ್ತಿದ್ದಾರೆ. ಈ ದೆಹಲಿ ಭೇಟಿಯು ಅವರಿಗೆ ಸಚಿವ ಸ್ಥಾನ ಖಚಿತಪಡಿಸುತ್ತದೆಯೇ ಅಥವಾ ಪಕ್ಷ ಸಂಘಟನೆಗೆ ಸಂಬAಧಿಸಿದ್ದೇ ಎಂಬ ಕುತೂಹಲ ಮೂಡಿಸಿದೆ. ಹೈಕಮಾಂಡ್‌ನ ಅಂತಿಮ ನಿರ್ಧಾರದ ಮೇಲೆ ಅವರ ಭವಿಷ್ಯ ನಿಂತಿದೆ.

Share with Friends
author avatar
Digital Desk