Latestಕಲಬುರಗಿ-Kalaburagi

ಕಲಬುರಗಿಯಲ್ಲಿ ಕಾವೇರಿದ ರಾಜಕೀಯ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ..!

​ಕಲಬುರಗಿ: ನೀಟ್ ಪರೀಕ್ಷೆ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ತಳ್ಳಾಟ-ನುಗ್ಗಾಟ ನಡೆದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ನೀಟ್ ಪರೀಕ್ಷೆ ವಿಚಾರವನ್ನು ಇಟ್ಟುಕೊಂಡು ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಖಂಡಿಸಿ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ತಳ್ಳಾಟ-ನುಗ್ಗಾಟ ನಡೆದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ರವಣಿಗೆ ಕಲಬುರಗಿಯ ಎಸ್.ವಿ.ಪಿ (SVP) ವೃತ್ತದಿಂದ ಕಾಂಗ್ರೆಸ್ ಕಚೇರಿ ಕಡೆಗೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಲಬುರಗಿಯಲ್ಲಿ ಕಾವೇರಿದ ರಾಜಕೀಯ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ


​ ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಯತ್ತ ತೆರಳದಂತೆ ಮಾರ್ಗ ಮಧ್ಯದಲ್ಲೇ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ತಳ್ಳಾಟ-ನುಗ್ಗಾಟ ನಡೆಯಿತು.
ಸನ್ನಿವೇಶ ಕೈಮೀರಿ ಹೋಗುತ್ತಿದ್ದಂತೆ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಶಾಸಕ ಅವಿನಾಶ್ ಜಾಧವ್ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

​ಬಂಧಿತ ನಾಯಕರನ್ನು ಪೊಲೀಸ್ ಜೀಪ್‌ನಲ್ಲಿ ಕರೆದೊಯ್ಯಲು ಯತ್ನಿಸಿದಾಗ, ಬಿಜೆಪಿ ಕಾರ್ಯಕರ್ತರು ಜೀಪ್‌ಗೆ ಅಡ್ಡಲಾಗಿ ನಿಂತು ಜೀಪ್ ಚಲಿಸದಂತೆ ತಡೆದರು. ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ತೀವ್ರ ಹೈಡ್ರಾಮಾ ನಡೆಯಿತು. ಅಂತಿಮವಾಗಿ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಬಂಧಿತರನ್ನು ಕರೆದೊಯ್ದರು.

Share with Friends
author avatar
Digital Desk