BlogLatestTop Storiesಬೆಂಗಳೂರು-Bengaluru

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕೊರಿಯೋಗ್ರಾಫರ್ ಬಂಧನ

ಬೆಂಗಳೂರು : ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ದಲ್ಲಿ ಆರೋಪಿಯನ್ನು ಬಂಧಿಸಿದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ನಿವಾಸಿ ಮುಕೇಶ್ವರನ್ ಬಂಧಿತ ಆರೋಪಿ.

ಕೊರಿಯೋಗ್ರಾಫರ್ ಕೆಲಸ ಮಾಡುತ್ತಿರುವ ಆರೋಪಿ ಮುಕೇಶ್ವರನ್ ಕೋರಮಂಗಲ ಪಬ್‌ಗೆ ಪಾರ್ಟಿಗೆ ಬಂದಿದ್ದ
ಈ ವೇಳೆ ಆರೋಪಿ ಮುಕೇಶ್ವರನ್ ಬಳಿ ಡ್ರಾಪ್ ಕೇಳಿದ್ದ ಯುವತಿ, ಡ್ರಾಪ್‌ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ.

ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾಗಳ ಪರಿಶೀಲನೆ ಬಳಿಕ ಬೈಕ್ ನಂಬರ್ ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯ ನಡೆಸುವ ವೇಳೆ ಆರೋಪಿ ಕಂಠಪೂರ್ತಿ ಮದ್ಯ ಸೇವಿಸಿದ್ದ ಎನ್ನಲಾಗಿದೆ.

ಇನ್ನು ಪ್ರಕರಣ ತನಿಖೆ ನಡೆಯುತ್ತಿರುವ ಎಚ್. ಎಸ್. ಆರ್ ಲೇಔಟ್ ಪೊಲೀಸ್ ಠಾಣೆಗೆ ಕಮಿಷನರ್ ದಯಾನಂದ್ ಭೇಟಿ ನೀಡಿ ಡಿಸಿಪಿ‌ ಸಾರಾ ಪಾತೀಮಾ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Share with Friends
author avatar
News Desk