Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ರಾಜ್ಯದಲ್ಲಿ ಸರ್ಕಾರದ ವಿರುದ್ದ ಅಪಪ್ರಚಾರ ನಡೆಸುವವರಿಗೆ ಅಗ್ರೆಸಿವ್ ಕೌಂಟರ್‌ ಕೊಡುವಂತೆ ಸಿಎಂ ಸೂಚನೆ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ (BJP- JDS) ಸರ್ಕಾರದ ವಿರುದ್ಧ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅಪಪ್ರಚಾರ ನಡೆಸುತ್ತಿವೆ, ಇದಕ್ಕೆ ಮುಲಾಜಿಲ್ಲದೆ ಅಗ್ರೆಸಿವ್ ಆಗಿ ಕೌಂಟರ್ ಮಾಡುವಂತೆ ಸಿಎಂ ಸಿದ್ದರಾಮಯ್ಯ(Siddaramamiah) ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹೇಳಿದ್ದಾರೆ ಎನ್ನಲಾಗಿದೆ.

ಸಂಸದ ಡಿ.ಕೆ.ಸುರೇಶ್ (DK̤ Suresh) ನಿವಾಸದ ಡಿನ್ನರ್ ಮೀಟಿಂಗ್ ನಲ್ಲಿ ಸಚಿವರಿಗೆ ಸಿಎಂ ಹಲವು ಸೂಚನೆಗಳನ್ನು ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಆಗುಹೋಗುಗಳ ಬಗ್ಗೆ ಹಾಗೂ ಚುನಾವಣಾ ಫಲಿತಾಂಶ ಕುರಿತು ಚರ್ಚೆ ನಡೆಯಿತು ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಿಲಿಕಾನ್‌ ಸಿಟಿಯ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ

https://youtu.be/SjqyqjIHY1A?si=rkGbjG4FxGfyKuoO

ಸರ್ಕಾರವನ್ನೇ ಟಾರ್ಗೆಟ್ ಮಾಡಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಫಲಿತಾಂಶದ ಬಳಿಕ ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕಾಗುತ್ತೆ. ಜೊತೆಗೆ ಮುಲಾಜಿಲ್ಲದೆ ಕೌಂಟರ್ ಮಾಡಿ ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ MEA

https://youtu.be/CQ5L1vxidf0?si=Ne_H5YLzGXVmkJFs

ಸಚಿವರ ಜೊತೆ ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಲೋಕಸಭಾ ಚುನಾವಣೆಯಲ್ಲಿ ಯಾವ್ಯಾವ ಕ್ಷೇತ್ರದಲ್ಲಿ ಫಲಿತಾಂಶ ಏನಾಗಬಹುದು ಎಂಬುದನ್ನ ಅಂಕಿ-ಅಂಶಗಳೊಂದಿಗೆ ಚರ್ಚಿಸಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಸಂಬಂಧ ಕಾವೇರಿ ನ್ಯಾಯಾಧೀಕರಣ ನೀಡಿರುವ ಆದೇಶದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಒಂದೆಡೆ ಭವಾನಿ ರೇವಣ್ಣ SIT ನೋಟಿಸ್‌ಗೆ ಡೋಂಟ್‌ಕೇರ್‌, ಇನ್ನೊಂದೆಡೆ ಡ್ರೈವರ್ ನಾಪತ್ತೆ

Share with Friends
author avatar
News Desk