Latestರಾಷ್ಟ್ರೀಯ-National

ಮುಂದುವರಿದ ಬಾಂಬ್‌ ಬೆದರಿಕೆ- ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆದರಿಕೆ ಕರೆ

ಮುಂಬೈ: ಜಸ್ಲೋಕ್ ಆಸ್ಪತ್ರೆ, ರಹೇಜಾ ಆಸ್ಪತ್ರೆ, ಸೆವೆನ್ ಹಿಲ್ಸ್ ಆಸ್ಪತ್ರೆ, ಕೊಹಿನೂರ್ ಆಸ್ಪತ್ರೆ, ಕೆಇಎಂ ಆಸ್ಪತ್ರೆ, ಜೆಜೆ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಸೇರಿದಂತೆ ಮುಂಬೈನ 50 ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ (Mumbai Hospitals ಮೂಲಕ ಬಾಂಬ್ ಬೆದರಿಕೆಗಳು (Bomb Threat) ಬಂದಿವೆ.

ವಿಪಿಎನ್ ನೆಟ್‌ವರ್ಕ್ ಬಳಸಿ ಇಮೇಲ್‌ ಮೂಲಕ ಬೆದರಿಕೆಯನ್ನ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಸದ್ಯ ಇಮೇಲ್‌ ಕಳುಹಿಸಿದವರ ಗುರುತು ಮತ್ತು ಬೆದರಿಕೆಯ ಉದ್ದೇಶ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಆಪ್‍ನಲ್ಲಿ ಹಣ ಹೂಡಿ ನಷ್ಟ – ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

https://youtu.be/xoOfBEbx3fE?si=jCWNNONllNexBtwW

ಮುಂಬೈನ ಹಿಂದೂಜಾ ಕಾಲೇಜ್ ಆಫ್ ಕಾಮರ್ಸ್ ಅನ್ನು ಸ್ಫೋಟಿಸುವ ಬೆದರಿಕೆಯ ನಕಲಿ ಇಮೇಲ್ ಕೂಡ ಸಂಸ್ಥೆಗೆ ಬಂದಿದೆ. ಪೊಲೀಸ್ ತಂಡಗಳು ಮತ್ತು ಬಾಂಬ್ ಸ್ಕ್ವಾಡ್ ಎರಡೂ ಸ್ಥಳಗಳಲ್ಲಿ ಸಂಪೂರ್ಣ ಶೋಧ ನಡೆಸಿದರೂ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇಮೇಲ್ ಕಳುಹಿಸಿದ ವ್ಯಕ್ತಿಗಾಗಿ ಮುಂಬೈ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಮುಂಬೈನ ವಿಪಿ ರೋಡ್ ಪೊಲೀಸ್ ಠಾಣೆ ಈ ಬಗ್ಗೆ ತನಿಖೆ ನಡೆಸುತ್ತಿದೆ.ಇದನ್ನೂ ಓದಿ: ರೀಲ್ಸ್‌ಗಾಗಿ ಕಾರು ರಿವರ್ಸ್‌ ತೆಗೆಯಲು ಹೋಗಿ 300 ಅಡಿ ಆಳಕ್ಕೆ ಬಿದ್ದು ಯುವತಿ ಸಾವು

https://youtu.be/y819RIZ3K7k?si=Kpixuv30JUOe8U8m

ನಿನ್ನೆ ಕೂಡ ಚೆನ್ನೈ, ಪಾಟ್ನಾ ಮತ್ತು ಜೈಪುರ ಸೇರಿದಂತೆ 41 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಗಳು ಬಂದಿದ್ದವು. ತಕ್ಷಣ ಅಲರ್ಟ್‌ ಆದ ಪೊಲೀಸರು ಎಲ್ಲಾ ಕಡೆ ಶೋಧ ಕಾರ್ಯ ನಡೆಸಿದ್ದರು. ಆದರೆ ಅಂತಹ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ.ಇದನ್ನೂ ಓದಿ: ಮತ್ತೆ ಅದೇ ಮೆಡಿಕಲ್‌ ಟೆಸ್ಟ್‌ ಮಾಡಿಸಲು ಹೇಳುತ್ತಾರೆ- ಜಡ್ಜ್‌ ಮುಂದೆ ಪ್ರಜ್ವಲ್‌ ಅಳಲು

Share with Friends
author avatar
News Desk