LatestWeatherಚಿಕ್ಕಮಗಳೂರು-Chikkamagaluruರಾಜ್ಯ-Karnataka

ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ- ಮಲೆನಾಡಿನ ಜನರ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಸೇರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಾಫಿನಾಡಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಹವಾಂತರಗಳು ಸೃಷ್ಟಿಯಾಗಿದ್ದು, ಜನರ ಜೀವನ ಅಸ್ತವ್ಯಸ್ತವಾಗಿದೆ.

ಸದ್ಯ ಶೃಂಗೇರಿ, ಕೊಪ್ಪ, ಎನ್.ಆ‌ರ್.ಪುರ, ಮೂಡಿಗೆರೆ, ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ,ಚಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಹ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟ್‌ನಲ್ಲಿ ವಾಹನ ಸವಾರರ ಪರದಡುವಂತಾಗಿದೆ. ಇದನ್ನೂ ಓದಿ: ಬೆಲೆ ಏರಿಕೆ ಬಿಸಿಯಿಂದ ಆರ್ಥಿಕ ಸಂಕಷ್ಟದಲ್ಲಿ ಆಟೋ ಚಾಲಕರು

https://youtu.be/DF5yh4qa8x8?si=x495m41dmdDMr72p

ಬೆಳಗ್ಗೆಯಿಂದಲೂ ಬಿಟ್ಟು-ಬಿಟ್ಟು ಸುರಿದ ಧಾರಾಕಾರ ಮಳೆಗೆ ಮಲೆನಾಡಿಗರ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಭಾರೀ ಪ್ರಮಾಣದಿಂದ ರಣ ಗಾಳಿ ಬೀಸುತ್ತಿದೆ. ಈ ಗಾಳಿ ಮಧ್ಯೆ ವಾಹನ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ:ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯ ಸ್ಥಿರ

Share with Friends
author avatar
News Desk