LatestWeatherದಕ್ಷಿಣ ಕನ್ನಡ-Dakshina Kannadaರಾಜ್ಯ-Karnataka

ರಾಜ್ಯದಲ್ಲಿ ಮುಂದುವರಿದ ಮಳೆ- ಕುಮಾರಧಾರ ಸ್ನಾನಘಟ್ಟ ಮುಳುಗಡೆ

ದಕ್ಷಿನ ಕನ್ನಡ: ರಾಜ್ಯದಲ್ಲಿ ಮಂಗಾರು ಚುರುಕುಗೊಂಡಿದ್ದು, ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಿಂದ ಕುಮಾರಧಾರ (Kumaradaara) ಸ್ನಾನಘಟ್ಟ ಮುಳುಗಡೆಗಾಯಿದೆ.

ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ (Kuke Subrahamanya) ಕುಮಾರಧಾರ ಸ್ನಾನಘಟ್ಟ ಪ್ರದೇಶ,ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಾರಧಾರ ಕಿಂಡಿ ಆಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದೆ. ಕುಮಾರಧಾರ ನದಿಗೆ ಇಳಿಯದಂತೆ ಭಕ್ತಾಧಿಗಳಿಗೆ ಸೂಚನೆ ನೀಡಲಾಗಿದೆ.

ಬುಧವಾರ ರಾತ್ರಿಯಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆ ಬರುವ ಭಕ್ತಾಧಿಗಳು ನದಿ ದಡದಲ್ಲೇ ತೀರ್ಥಸ್ನಾನ ಮಾಡುತ್ತಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಮುಂದುವರೆದ ಮಳೆ ಅಬ್ಬರ- ಮಲೆನಾಡಿನ ಜನರ ಜೀವನ ಅಸ್ತವ್ಯಸ್ತ

ಇನ್ನೂ ಕುಮಾರಧಾರ ಉಪನದಿ ದರ್ಪಣ ತೀರ್ಥ ತುಂಬಿ ಹರಿಯುಗತ್ತಿದ್ದು, ನದಿತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿ, ಹೋಮ್ ಗಾರ್ಡ್ಸ್ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ- ಓರ್ವ ಸಾವು 10 ಕ್ಕೂ ಹೆಚ್ಚು ಮಂದಿಗೆ ಗಾಯ

https://youtu.be/DF5yh4qa8x8?si=PkIs29vpijPt_pTY
Share with Friends
author avatar
News Desk