BlogEntertainmentLatestTop Storiesಸ್ಯಾಂಡಲ್​ವುಡ್-Sandalwood

ಕಾಪಿರೈಟ್ ಕೇಸ್ : ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಅವರು ಯಶವಂತಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದು, ನಟನನ್ನು ಪೊಲೀಸರು 1 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ. ‘ಬ್ಯಾಚುಲರ್ ಪಾರ್ಟಿ’ ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ನಟ ರಕ್ಷಿತ್ ಶೆಟ್ಟಿ ಇಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು.

ವಿಚಾರನಷ್ಟೇ ಮುಗಿಸಿ ಹೊರಬಂದು ಮಾಧ್ಯಮಕ್ಕೆ ಪ್ರತಿಕ್ರಿಸಿದ ಅವರು ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದಿದ್ದಾರೆ. ಕಾಪಿರೈಟ್ ಬಗ್ಗೆ ಇಂಡಸ್ಟ್ರಿಯಲ್ಲಿ ನಾಲೆಡ್ಜೇ ಇಲ್ಲ. ನನ್ನ ಪ್ರಕಾರ, ಕಾಪಿರೈಟ್ ಉಲ್ಲಂಘನೆ ಅಲ್ಲ. ಈ ಸಿನಿಮಾಗೂ ಮುನ್ನ ಆ ಹಾಡುಗಳನ್ನು ಬಳಸಲು ಅನುಮತಿಗಾಗಿ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಅವರ ಬಳಿ ಮಾತನಾಡಿದಾಗ, ಹೆಚ್ಚಿನ ಮೊತ್ತ ಕೇಳಿದ್ದರು. ಅಷ್ಟು ದೊಡ್ಡ ಅಮೌಂಟ್ ಕೊಡೋಕೆ ನಮಗೆ ಸರಿ ಎನಿಸಲಿಲ್ಲ. ಆಮೇಲೆ ಅವರು ಹೇಳ್ತೀವಿ ಅಂತ ಆ ಮಾತುಕತೆ ಅಲ್ಲೇ ನಿಂತು ಹೋಯಿತು. ಈ ಸಿನಿಮಾದ ರಿಲೀಸ್ ನಂತರ ಅವರು ಕೇಸ್ ಹಾಕಿದ್ದಾರೆ ಎಂದಿದ್ದಾರೆ.

ಮೊದಲಿಗೆ ಇದು ಕಾಪಿರೈಟ್ ಉಲ್ಲಂಘನೆ ಅಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ನಟ ಪ್ರಶ್ನಿಸಿದ್ದಾರೆ. ಕೊಟ್ಟಿರುವ ಕಂಪ್ಲೆಂಟ್‌ಗೆ ನಾನು ಕೂಡ ಕೋರ್ಟ್‌ನಲ್ಲಿ ಫೈಟ್ ಮಾಡ್ತೀನಿ ಎಂದಿದ್ದಾರೆ.

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

Share with Friends
author avatar
News Desk