EntertainmentLatestಬೆಂಗಳೂರು-Bengaluruರಾಜಕೀಯ | Politics

ಭೇಟಿಯಾದ ಕ್ರೇಜಿಸ್ಟಾರ್..! ಡಿಕೆಶಿ-ರವಿಚಂದ್ರನ್ ಭೇಟಿಯಿಂದ ತೀವ್ರ ಕುತೂಹಲ..!

ಬೆಂಗಳೂರು: ಇಂದು ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ಮಾಪಕ ಹಾಗೂ ನಿರ್ದೇಶಕರಾದ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ಸದಾಶಿವನಗರದಲ್ಲಿರುವ ಡಿಕೆಶಿ ನಿವಾಸದಲ್ಲಿ ಸುಮಾರು 30 ನಿಮಿಷಗಳ ಕಾಲ ಇಬ್ಬರೂ ಖಾಸಗಿ ಮಾತುಕತೆ ನಡೆಸಿದರು.

ಭೇಟಿ ನಡೆದಿದ್ದು ಏಕೆ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ. ರವಿಚಂದ್ರನ್ ರಾಜಕೀಯದಲ್ಲಿ ಆ್ಯಕ್ಟಿವ್ ಆಗಿಲ್ಲ. ಹೀಗಾಗಿ, ಈ ಭೇಟಿ ಸಿನಿಮಾಗೆ ಸಂಬಂಧಿಸಿದ ವಿಷಯಕ್ಕೆ ನಡೆದಿರಬಹುದು ಎಂಬ ಕುತೂಹಲ ಹೆಚ್ಚಿದೆ.

ರಾಜ್ಯ ಸರ್ಕಾರದ ವತಿಯಿಂದ ಚಿತ್ರರಂಗಕ್ಕೆ ನೀಡುವ ಸೌಲಭ್ಯಗಳು, ಹೊಸ ಸಿನಿಮಾ ನೀತಿ, ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಇರುವ ತೊಂದರೆಗಳು ಕುರಿತು ಚರ್ಚೆ ನಡೆದಿರಬಹುದು ಎಂದು ಮೂಲಗಳು ತಿಳಿಸಿವೆ.

ಅಲ್ಲದೆ ರವಿಚಂದ್ರನ್ ಅವರ ಮುಂಬರುವ ಬಹುನಿರೀಕ್ಷಿತ ಸಿನಿಮಾಗೆ ಸರ್ಕಾರದಿಂದ ಸಹಕಾರ ಕೋರಲು ಈ ಭೇಟಿ ಮಾಡಿರಬಹುದು ಎಂಬ ಮಾತುಗಳೂ ಕೇಳಿಬಂದಿವೆ.ಚಿತ್ರರಂಗ ಮತ್ತು ರಾಜಕಾರಣ ಎರಡರಲ್ಲೂ ಪ್ರಭಾವಿ ವ್ಯಕ್ತಿಗಳಾದ ಇಬ್ಬರು ಭೇಟಿಯಾಗಿರುವುದು ರಾಜಕೀಯ ಹಾಗೂ ಸಿನಿವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಮುಂದಿನ ದಿನಗಳ ರಾಜಕೀಯ ಬೆಳವಣಿಗೆಗಳ ನಡುವೆ ಈ ಭೇಟಿ ನಡೆದಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.ಭೇಟಿ ಬಳಿಕ ಇಬ್ಬರೂ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.

Share with Friends
author avatar
Digital Desk