BlogLatestTop Storiesಕ್ರೀಡೆ-Sports

ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಗಾಂಧೀನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪೊಲಿಟಿಕಲ್ ಇನ್ನಿಂಗ್ಸ್ ಆರಂಭ ಮಾಡಿದ್ದಾರೆ. ಬಿಜೆಪಿ ದೇಶಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಿದೆ. ಈ ಅಭಿಯಾನದ ಭಾಗವಾಗಿ ಜಡೇಜಾ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ರವೀಂದ್ರ ಜಡೇಜಾ ಪತ್ನಿ ಗುಜರಾತ್ ಶಾಸಕಿ ರಿವಾಬಾ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್‌ನಲ್ಲಿ ತಮ್ಮ ಬಿಜೆಪಿ ಸದಸ್ಯತ್ವ ಕಾರ್ಡ್‌ಗಳನ್ನು ಹಂಚಿಕೊಂಡಿದ್ದಾರೆ.. ಆದರೆ ಈ ಬಗ್ಗೆ ರವೀಂದ್ರ ಜಡೇಜಾ ಎಲ್ಲಿಯೂ ಅಧಿಕೃತವಾಗಿ ತಿಳಿಸಿಲ್ಲ.

ಜಡೇಜಾ ಪತ್ನಿ ರಿವಾಬಾ 2019ರಲ್ಲಿ ಬಿಜೆಪಿ ಸೇರಿ. 2022ರ ವಿಧಾನಸಭಾ ಚುನಾವಣೆಯಲ್ಲಿ ಜಾಮ್‌ನಗರ್ ಉತ್ತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಕೂಡ ತಮ್ಮ ಪತ್ನಿಯೊಂದಿಗೆ ಪ್ರಚಾರದಲ್ಲಿ ಭಾಗವಹಿಸಿದ್ದರು. ಅಲ್ಲದೆ, ಹಲವು ಕಡೆಗಳಲ್ಲಿ ರೋಡ್ ಶೋ ನಲ್ಲಿಯೂ ಕಾಣಿಸಿಕೊಂಡಿದ್ದರು.

ಜಡೇಜಾ ಟಿ20 ವಿಶ್ವಕಪ್‌ನ ವಿಜಯದ ನಂತರ ಟಿ20 ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಈ ತಿಂಗಳಿನಿಂದ ಪ್ರಾರಂಭವಾಗುವ ಟೆಸ್ಟ್ ಸರಣಿಯಿಂದ ಭಾರತ ತಂಡಕ್ಕೆ ಮರಳಿದ್ದಾರೆ. ಭಾರತ ಹಾಗೂ ಬಾಂಗ್ಲಾ ದೇಶದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಸೆ.19 ರಿಂದ ಪ್ರಾರಂಭಗೊಳ್ಳಲಿದೆ.

Share with Friends
author avatar
News Desk