Latestಯಾದಗಿರಿ

ದಲಿತ ಮುಖಂಡ ದೇವಿಂದ್ರಪ್ಪ ದಳಪತಿ ಕೊಲೆ ಪ್ರಕರಣ..!

​ಯಾದಗಿರಿ: ಜಿಲ್ಲೆಯ ಶಹಾಪೂರ ತಾಲೂಕಿನ ಕನ್ಯಾಕೋಳುರ ಗ್ರಾಮದಲ್ಲಿ ನಡೆದಿದ್ದ ದಲಿತ ಮುಖಂಡ ದೇವಿಂದ್ರಪ್ಪ ದಳಪತಿ ಅವರ ಅಮಾನವೀಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಾದಗಿರಿ ಜಿಲ್ಲಾ ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
​ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಒಟ್ಟು 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ₹4.25 ಲಕ್ಷ ದಂಡ ವಿಧಿಸಿ ಆದೇಶಿಸಿದೆ.

ದಲಿತ ಮುಖಂಡ ದೇವಿಂದ್ರಪ್ಪ ದಳಪತಿ ಕೊಲೆ ಪ್ರಕರಣ

ಗ್ರಾಮದ ಜಾತ್ರಾಮಹೋತ್ಸವದಲ್ಲಿ ಬ್ಯಾನರ್ ಹರಿದ ಸಣ್ಣ ವಿಚಾರಕ್ಕೆ ಸವರ್ಣೀಯರು ಹಾಗೂ ದಲಿತರ ನಡುವೆ ಭೀಕರ ಗಲಾಟೆ ನಡೆದಿತ್ತು.
ಈ ಗಲಾಟೆಯ ದ್ವೇಷದ ಹಿನ್ನೆಲೆಯಲ್ಲಿ ದಲಿತ ಮುಖಂಡ ದೇವಿಂದ್ರಪ್ಪ ದಳಪತಿ ಅವರನ್ನು ಅಮಾನವೀಯವಾಗಿ ಹತ್ಯೆ ಮಾಡಲಾಗಿತ್ತು.


2014ರಲ್ಲಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
​ಸುದೀರ್ಘ 10 ವರ್ಷಗಳ ನ್ಯಾಯಾಂಗ ಹೋರಾಟದ ಬಳಿಕ ಇಂದು ನ್ಯಾಯಾಲಯವು ಈ ಕಠಿಣ ಶಿಕ್ಷೆಯನ್ನು ಪ್ರಕಟಿಸಿದ್ದು, ಸಂತ್ರಸ್ತ ಕುಟುಂಬಕ್ಕೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ.

Share with Friends
author avatar
Digital Desk