BlogEntertainmentLatestTop Stories

ದರ್ಶನ್‌ ಬಿಡುಗಡೆಗಾಗಿ ದೇವರ ಮೊರೆಹೋದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ಗಾಗಿ ಪತ್ನಿ ವಿಜಯಲಕ್ಷ್ಮಿ ದೇವರ ಮೊರೆ ಹೋಗಿದ್ದಾರೆ. ಪತಿ ದರ್ಶನ್ ಬಿಡುಗಡೆಗಾಗಿ ಪತ್ನಿ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಆ.4ರಂದು ಭೀಮನ ಅಮವಾಸ್ಯೆ ಪ್ರಯುಕ್ತ ನಗರದ ಬನಶಂಕರಿ ದೇವಸ್ಥಾನಕ್ಕೆ ಸ್ನೇಹಿತೆ ಜೊತೆ ಭೇಟಿ ನೀಡಿದ್ದು, ವಿಜಯಲಕ್ಷ್ಮಿ ಸಂಕಲ್ಪ ಪೂಜೆ ಮಾಡಿಸಿದ್ದಾರೆ.

ಕಳೆದ ವಾರವಷ್ಟೇ ಕೊಲ್ಲೂರು ಮೂಕಾಂಬಿಕಾ ದೇವಿಗೆ ನವ ಚಂಡಿಕಾ ಯಾಗ ಮಾಡಿಸಿದ್ದರು ವಿಜಯಲಕ್ಷ್ಮಿ. ಅದೇ ದಿನ ದಿನಕರ್ ತೂಗುದೀಪ್ ಕೂಡ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದರು.

. ಪತಿಯನ್ನ ಆಚೆ ತರಲು ವಿಜಯಲಕ್ಷ್ಮಿ ಶಕ್ತಿ ದೇವತೆಗಳ‌ ಮೋರೆ ಹೋಗಿದ್ದಾರೆ. ಅತ್ತ ಮಾವನಿಗಾಗಿ ಅಳಿಯ ಕೂಡ ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿರುವ ಆರತಿ ಉಕ್ಕಡದಲ್ಲಿ ದರ್ಶನ್ ಅಳಿಯ ಚಂದನ್ ನಿಂದ ವಿಶೇಷ ಪೂಜೆ ನೆರವೇರಿದೆ.

ಈ ಮಧ್ಯೆ ಚಾರ್ಜ್ ಶೀಟ್ ಸಲ್ಲಿಕೆಗೆ ಪ್ರಮುಖ ಸಾಕ್ಷಿದಾರ ಪೊಲೀಸರಿಗೆ ಸಿಕ್ಕಂತಾಗಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಬಳಿಕ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿರುವ ಪೊಲೀಸರು ಈ ವರೆಗೆ ಸುಮಾರು 200 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರಂತೆ. ಇದರ ಬೆನ್ನಲ್ಲೇ ಗಂಡನ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ದೇವಸ್ಥಾನ ಸುತ್ತುತ್ತಿದ್ದಾರೆ.

Share with Friends
author avatar
News Desk