LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಡೆಡ್ಲಿ ಸೋಮ ಬಂಧನ

ದೇವನಹಳ್ಳಿ.ಸೆ.27- ಪೊಲೀಸರಿಂದ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಸೋಮಶೇಖರ ಅಲಿಯಾಸ್ ಡೆಡ್ಲಿ ಸೋಮನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊAಡಿದ್ದ ಆರೋಪಿ ಡೆಡ್ಲಿ ಸೋಮ ಕಾಲೇಜುಗಳ ಸುತ್ತಮುತ್ತ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ.ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂ ದ ಸುಮಾರು 2 ಕೆಜಿ ಗಾಂಜಾ, ಅಂದಾಜು 1 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share with Friends
author avatar
Digital Desk