LatestTop Storiesಬೆಂಗಳೂರು-Bengaluru

ದೇವಾಲಯಗಳ ಹುಂಡಿ ಮೇಲೆ ಸಿಸಿಟಿವಿ ಕಣ್ಣು

ಬೆಂಗಳೂರು, ಜು.11: ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್, ರಾಮಮಂದಿರದಲ್ಲಿ ಯಾವ ರೀತಿ ಕಳ್ಳತನವಾಗಿದೆ ಎಂದು ಗಮನಿಸಿದ್ದೀರಿ. ನಮ್ಮ ರಾಜ್ಯದಲ್ಲಿ ಮುಂಜಾಗ್ರತೆಯಿಂದ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳಲ್ಲಿ ಸ್ಥಳೀಯ ಮುಖಂಡರು, ಪೊಲೀಸ್ ಅಧಿಕಾರಿಗಳು ಸೇರಿ ಹುಂಡಿ ತೆಗೆಯುವುದರಿಂದ, ಹಣ ಏಣಿಕೆ ಮಾಡುವುದು ಸೇರಿ ಅವುಗಳನ್ನು ಬ್ಯಾಂಕಿಗೆ ಸಲ್ಲಿಸುವವರೆಗೂ ಎಲ್ಲವನ್ನು ವಿಡಿಯೋ ದಾಖಲಾತಿ ಮಾಡಬೇಕು ಎಂದು ಮಾರ್ಗದರ್ಶನ ನೀಡಿದ್ದೇನೆ ಎಂದರು.
ಇದರ ಬಗ್ಗೆ ಬೆಳಗಾವಿಯಲ್ಲಿ ಘೋಷಣೆ ಮಾಡಲಾಗಿದೆ. ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು. ನಮ್ಮ ರಾಜ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾಗಿರುವುದು ಮುಖ್ಯ ಎಂದರು.
ಯಾವುದೇ ಧರ್ಮದ ದೇವಾಲಯವಿದ್ದರೂ ಸರ್ಕಾರದ ವ್ಯಾಪ್ತಿಯಲ್ಲಿದ್ದರೆ ಅವುಗಳ ರಕ್ಷಣೆ ನಮ್ಮ ಕರ್ತವ್ಯವಾಗಲಿದೆ. ಅಪರಾಧವಾದ ಬಳಿಕ ಹುಡುಕುವುದಕ್ಕಿಂತ ಅಪರಾಧ ನಡೆಯದಂತೆ ಎಚ್ಚರಿಕೆ ವಹಿಸಬೇಕು. ನಮ್ಮ ತೀರ್ಮಾನ ನೋಡಿ, ಖಾಸಗಿ ದೇವಾಲಯ ಹಾಗೂ ಮಠ ಮಾನ್ಯಗಳು ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ತಿಳಿಸಿದರು.

Share with Friends
author avatar
Digital Desk