
ಬಾರದ ಲೋಕಕ್ಕೆ ದೇವೇಗೌಡರ ಪತ್ನಿ ಚೆನ್ನಮ್ಮ, ನಾಳೆ ಹಾಸನದಲ್ಲಿ ಅಂತಿಮ ಸಂಸ್ಕಾರ..!
ಬೆಂಗಳೂರಿನಲ್ಲಿ ಅಂತಿಮ ದರ್ಶನ ಹೃದಯಾಘಾತದಿಂದ ನಿಧನರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಇಂದು ಮಧ್ಯಾಹ್ನದವರೆಗೆ ಇಡಲಾಗಿತ್ತು.
ಬೆಂಗಳೂರಿನಲ್ಲಿ ಸಾರ್ವಜನಿಕ ದರ್ಶನದ ಬಳಿಕ ಮೃತದೇಹವನ್ನು ಹಾಸನಕ್ಕೆ ರವಾನಿಸಲಾಗಿದೆ. ಇಂದು ರಾತ್ರಿವರೆಗೆ ಹಾಸನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತದನಂತರ ಹೆಚ್.ಡಿ. ರೇವಣ್ಣ ಅವರ ನಿವಾಸಕ್ಕೆ ಮೃತದೇಹವನ್ನು ಕೊಂಡೊಯ್ಯಲಾಗುವುದು.
ನಾಳೆ ಬೆಳಗ್ಗೆ 9.30ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಕುಟುಂಬಸ್ಥರ ಸಮ್ಮುಖದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಚೆನ್ನಮ್ಮ ಅವರು ಅತಿಯಾಗಿ ಆರಾಧಿಸುತ್ತಿದ್ದ ಇಷ್ಟದೈವ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿಯೇ ಅವರ ಅಂತ್ಯಕ್ರಿಯೆ ಜರುಗಲಿದ್ದು, ಆ ಮೂಲಕ ಇಷ್ಟದೈವದ ಮಡಿಲಿನಲ್ಲೇ ಚೆನ್ನಮ್ಮ ಲೀನವಾಗಲಿದ್ದಾರೆ.
