Blogರಾಷ್ಟ್ರೀಯ-National

ತಿರುಪತಿ ಲಡ್ಡುನಲ್ಲಿ ತಂಬಾಕಿನ ತುಂಡುಗಳು ಪತ್ತೆ, ಮಹಿಳೆ ಆರೋಪ

ಹೈದರಾಬಾದ್: ತಿರುಪತಿ ಲಡ್ಡು ಪ್ರಸಾದದಲ್ಲಿ ತೆಲಂಗಾಣದ ಮಹಿಳಾ ಭಕ್ತೆಯೊಬ್ಬರು ತನಗೆ ನೀಡಲಾದ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆಯಾಗಿರುವುದಾಗಿ ಆರೋಪಿಸಿದ್ದಾರೆ.

ಲಡ್ಡು ಪ್ರಸಾದದಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾಗಿರುವ ವಿಚಾರ ಮಾಸುವ ಮುನ್ನವೇ ತೆಲಂಗಾಣದ ಖಮ್ಮಂ ಜಿಲ್ಲೆಯ ಭಕ್ತೆಯೊಬ್ಬರು ಪವಿತ್ರ ತಿರುಪತಿ ಲಡ್ಡು ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮನೆಗೆ ತಂದ ಪ್ರಸಾದದಲ್ಲಿ ಕಾಗದದಲ್ಲಿ ಸುತ್ತಿದ ತಂಬಾಕು ತುಂಡುಗಳು ಪತ್ತೆಯಾಗಿವೆ ಎಂದು ಆರೋಪಿಸಿದ್ದಾರೆ.

ಗೊಲ್ಲಗುಡೆಂ ಪ್ರದೇಶದ ಕಾರ್ತಿಕೇಯ ಟೌನ್‌ಶಿಪ್‌ನ ನಿವಾಸಿಯಾಗಿರುವ ದೊಂತು ಪದ್ಮಾವತಿ ಅವರು ಸೆಪ್ಟೆಂಬರ್ 19 ರಂದು ತಿರುಮಲ ದೇವಸ್ಥಾನಕ್ಕೆ ಭೇಟಿ ತಂಡ ಲಡ್ಡು ಪ್ರಸಾದದಲ್ಲಿ ತಂಬಾಕು ಪತ್ತೆಯಾಗಿದೆ ಎಂದು ವರದಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಮಹಿಳೆ ಸೆಪ್ಟೆಂಬರ್ 19 ರಂದು ನೆರೆಹೊರೆಯವರ ಜೊತೆಗೆ ನಾನು ತಿರುಪತಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ಲಡ್ಡು ಪ್ರಸಾದ ಮನೆಗೆ ತಂದಿದ್ದೆ ಹಾಗೆ ಮನೆ ಮಂದಿಗೆ ಹಂಚಲೆಂದು ಲಡ್ಡು ಪ್ರಸಾದ ತೆರೆದಾಗ ಅದರಲ್ಲಿ ಕಾಗದದಿಂದ ಸುತ್ತಿದ ರೀತಿಯಲ್ಲಿ ತಂಬಾಕಿನ ತುಂಡುಗಳು ಪತ್ತೆಯಾಗಿದೆ ಅಲ್ಲದೆ ತನ್ನ ಮೊಬೈಲ್ ನಲ್ಲಿ ಇದರ ಫೋಟೋ ಕೂಡ ತೆಗೆದಿರುವುದಾಗಿ ಹೇಳಿಕೊಂಡಿದ್ದಾರೆ.

Share with Friends
author avatar
News Desk