Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಜರ್ಮನಿಯಿಂದ ಹೊರಟು ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ ?

ಬೆಂಗಳೂರು: ಅಶ್ಲೀಲ ಪೆನ್ ಡ್ರೈವ್ (Pen Drive) ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಇಂದು ಜರ್ಮನಿಯ (Germany) ಮ್ಯೂನಿಕ್‌ನಿಂದ ಹೊರಟು ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 12:30ಕ್ಕೆ ಲುಫ್ತಾನ್ಸಾ ಏರ್‌ಲೈನ್ಸ್ ಮ್ಯೂನಿಕ್‌ನಿಂದ ಹೊರಟು ರಾತ್ರಿ 12:30ಕ್ಕೆ ಬೆಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ 3 ಮಕ್ಕಳು ಶವವಾಗಿ ಪತ್ತೆ- FIR ದಾಖಲು

https://youtu.be/am20I7-S2dU?si=PMZD98WwZeD3zWsk

ಬುಸಿನೆಸ್ ಕ್ಲಾಸ್ ಟಿಕೆಟ್‌ಅನ್ನು ಪ್ರಜ್ವಲ್ ರೇವಣ್ಣ ಅವರು ಬುಕ್ ಮಾಡಿದ್ದು, ಈವರೆಗೂ ಟಿಕೆಟ್ ಕ್ಯಾನ್ಸಲ್ ಮಾಡಿಲ್ಲ. ಕೊನೆ ಕ್ಷಣದಲ್ಲಿ ಟಿಕೆಟ್ ರದ್ದು ಮಾಡದೇ ಇದ್ದರೆ ಪ್ರಜ್ವಲ್ ರೇವಣ್ಣ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಕೈ ಕೊಟ್ಟಿದಕ್ಕೆ ಯುವಕ ಆತ್ಮಹತ್ಯೆ

https://youtu.be/lwT9p6w4n0U?si=s5TYL1_JLNI0qHeJ

ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಪೊಲೀಸರು ಹೆಚ್‌ಡಿ ರೇವಣ್ಣ ಅವರನ್ನು ಬಂಧಿಸಿತ್ತು. ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ :ಲಿಖಿತ್ ಗೌಡ, ಚೇತನ್ ಜಾಮೀನು ಅರ್ಜಿ ವಜಾ

Share with Friends
author avatar
News Desk