
ಹಾಸ್ಟೆಲ್ನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಆತ್ಮಹತ್ಯೆ
ದೇವನಹಳ್ಳಿ.ಸೆ.29-ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಬೆಂಗಳೂರಿನ ವಿಜಯನಗರ ನಿವಾಸಿ ಜೋಹೆಲ್ (೧೮) ಮೃತ ವಿದ್ಯಾರ್ಥಿಯಾಗಿದ್ದು, ಚನ್ನರಾಯಪಟ್ಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ಜೋಹೆಲ್ ಹಾಸ್ಟೆಲ್ನ ಕೊಠಡಿಯಲ್ಲಿದ್ದ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿಷಯ ತಿಳಿದು ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ಹಾಸ್ಟೆಲ್ನ ಫ್ಯಾನ್ನಿಂದ ಮೃತದೇಹವನ್ನು ಕೆಳಗಿಳಿಸಿ, ಖಾಸಗಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಲಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಚನ್ನರಾಯಪಟ್ಟಣ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
