LatestTop Storiesಜಿಲ್ಲಾ ಸುದ್ದಿಗಳು | District Newsಬೆಂಗಳೂರು-Bengaluru

ರೇಷನ್ ಕಾರ್ಡ್ ಇ-ಕೆವೈಸಿ ಗಡುವು ವಿಸ್ತರಣೆ ಬಗ್ಗೆ ಚರ್ಚೆ

ಬೆಂಗಳೂರು.ಸೆ.17: ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸಬೇಕಿದ್ದು,ತಾಂತ್ರಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಗಡುವು ವಿಸ್ತರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ದಾರರು ಇ-ಕೆವೈಸಿ ಮಾಡಿಸಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಮುಂದೆ ಬೆಳಗ್ಗೆಯಿಂದ ಸಂಜೆವರೆಗೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಆದರೆ ಸರ್ವರ್ ಸೇರಿದಂತೆ ತಾಂತ್ರಿಕ ಸಮಸ್ಯೆಗಳಿಂದಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿವೆ.

ಸೆ.30ರ ಗಡುವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಸಾಧ್ಯವಾಗದಿದ್ದರೆ ರೇಷನ್ ಕಾರ್ಡ್ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕವೂ ಕಾರ್ಡ್ದಾರರಲ್ಲಿ ಮೂಡಿದೆ.

ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ದಾರರು ಇ-ಕೆವೈಸಿ ಮಾಡಿಸಲು ನ್ಯಾಯಬೆಲೆ ಅಂಗಡಿಗಳ ಮುಂದೆ ಬೆಳಗ್ಗೆಯಿಂದ ಸಂಜೆವರೆಗೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ. ಆದರೆ ಸರ್ವರ್ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳಿಂದಾಗಿ ಹಲವು ಮಂದಿಗೆ ಇ-ಕೆವೈಸಿ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ಇದರ ನಡುವೆ ಸೆಪ್ಟೆಂಬರ್ 30 ಅಂತಿಮ ಗಡುವಾಗಿರುವುದರಿಂದ ಇ-ಕೆವೈಸಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ರೇಷನ್ ಕಾರ್ಡ್ಗೆ ತೊಂದರೆಯಾಗಬಹುದು ಎಂಬ ಆತಂಕವೂ ಕಾರ್ಡ್ದಾರರಲ್ಲಿ ಮೂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್,ಸಾಲು ಸಾಲು ರಜೆಗಳು ಇರುವುದರಿಂದ ಇ-ಕೆವೈಸಿ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಾಂತ್ರಿಕ ಸಮಸ್ಯೆಯ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಗಡುವು ವಿಸ್ತರಣೆ ಮಾಡಬೇಕೇ ಎಂಬ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಾಂತ್ರಿಕ ಸಮಸ್ಯೆ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಉಂಟಾಗಿರುವ ಜನದಟ್ಟಣೆಯನ್ನು ಪರಿಗಣಿಸಿ ಹೆಚ್ಚುವರಿ ಕಾಲಾವಕಾಶ ನೀಡುವ ಸಾಧ್ಯತೆ ಇದೆ. ಈ ಕುರಿತು ಸರ್ಕಾರದ ಅಂತಿಮ ನಿರ್ಧಾರ ಹೊರಬೀಳಬೇಕಿದೆ.

Share with Friends
author avatar
Digital Desk