ರೈಲ್ವೇ ಇಲಾಖೆ ರಾಜ್ಯ ಸಚಿವ ಸೋಮಣ್ಣನವರನ್ನು ಭೇಟಿಯಾದ ಡಿಕೆಶಿ
ನವದೆಹಲಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನವದೆಹಲಿಯ ಕರ್ನಾಟಕ ಭವನದಲ್ಲಿ ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ಇಲಾಖೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರ ಜೊತೆ ಸಮಾಲೋಚನೆ ನಡೆಸಿದರು. ಈ ಸಭೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಾದ ಗೌರವ್ ಗುಪ್ತಾ, ಉಮಾಶಂಕರ್, ತುಷಾರ್ ಗಿರಿನಾಥ್, ರಾಜೇಂದ್ರ ಚೋಳನ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೆ ವೇಳೆ ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಅವರ ಬಳಿ ಬೇಡಿಕೆ ಇಡಲಾಗಿದೆ. ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಅವರು ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು.
ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು ಮಳೆ ನೀರುಗಾಲುವೆಗಳ ಅಭಿವೃದ್ಧಿ ಹಾಗೂ ನೀರಾವರಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು.
