Latestಬೆಂಗಳೂರು-Bengaluruರಾಜ್ಯ-Karnataka

ರೌಡಿಗಳಿಂದ ಹಣ ವಸೂಲಿ..ಸಿಎಂ ಡಿಕೆಶಿ ಶಾಕಿಂಗ್‌ ಸ್ಟೇಟ್‌ ಮೆಂಟ್‌!!

ಬೆಂಗಳೂರು, ಜು.10: ಜುಲೈ 1 ರಿಂದ ಇಲ್ಲಿಯವರೆಗು ಒಟ್ಟು 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗಗಳಲ್ಲಿ ಒಟ್ಟು 9,878 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೀಕ್ಷಿಸಿದ ಸಿಎಂ ಡಿಕೆಶಿವಕುಮಾರ್

ಬೆಂಗಳೂರಿನ ನಡೆಯುತ್ತಿರುವ ಆಪರೇಷನ್‌ ಪುಟ್‌ ಪಾತ್‌ ಬಗ್ಗೆ ಮಾತನಾಡಿದ ಅವರು,ಒಟ್ಟು 1,340 ಅಂಗಡಿಗಳಿದ್ದವು, ಸುಮಾರು 1,800 ತಳ್ಳುವ ಗಾಡಿಗಳಿದ್ದವು. ತಳ್ಳುವ ಗಾಡಿಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಸುಮಾರು 2,267 ಅಂಗಡಿ ಮುಂಭಾಗದಲ್ಲಿ ತಗಡಿನ ಶೀಟ್ ಗಳನ್ನು ಅಳವಡಿಸಲಾಗಿತ್ತು ಅದನ್ನೂ ಸಹ ತೆಗೆಯಲಾಗಿದೆ. 2,300 ಮೆಟ್ಟಿಲು, ರ್ಯಾಂಪ್ ಗಳು, 2,662 ಪಿಲ್ಲರ್ ಗಳು ಬೋರ್ಡ್ ಗಳು, 2,247 ಶೆಡ್ ಗಳನ್ನು ತೆರವುಗೊಳಿಸಲಾಗಿದೆ. ತೆರವಾದ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದು ಜೊತೆಗೆ ಪಾದಚಾರಿ ಮಾರ್ಗಗಳನ್ನು ದುರಸ್ಥಿ ಮಾಡುವ ಕೆಲಸವನ್ನೂ ಮಾಡಿಕೊಂಡು ಬರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇನ್ನು ನಾವು ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಿದ್ದೆವು. ಅದಕ್ಕೆ ನ್ಯಾಯಲಯ ತಡೆಯಾಜ್ಞೆ ನೀಡಿತ್ತು, ಈಗ ಮತ್ತೆ ಈ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ. ಅವರಿಗಾಗಿಯೇ ಸೂಚಿತ ಜಾಗಗಳನ್ನು ಗುರುತಿಸಲಾಗುವುದು. ಅಲ್ಲಿ ನೀವು ವ್ಯಾಪಾರ ನಡೆಸಬಹುದು ಎಂದರು.

ಇದಲ್ಲದೆ, ಟೀಕೆ ಇರುತ್ತದೆ. ಬೆಂಗಳೂರಿನ ಸುಧಾರಣೆಗಾಗಿ ನಾವು ಟೀಕೆಗಳನ್ನು ಸ್ವೀಕರಿಸಲು ಸಿದ್ಧರಿದ್ದೇವೆ. ಇದರ ಹಿಂದೆ ದೊಡ್ಡ ಮಾಫಿಯಾ ಇದೆ. ರೌಡಿಗಳು ವ್ಯಾಪಾರಿಗಳಿಂದ ವಸೂಲಿ ಮಾಡುವ ಕೆಲಸಗಳು ನಡೆದಿವೆ. ಈ ಬಗ್ಗೆ ಮಾಹಿತಿಯೂ ನಮಗಿದೆ. ಪೊಲೀಸ್ ಹಾಗೂ ಜಿಬಿಎ ಅಧಿಕಾರಿಗಳಿಗೆ ನಾವು ಸ್ವಾತಂತ್ರ್ಯ ನೀಡಿದ್ದೇವೆ. ಸ್ವಚ್ಚ ಬೆಂಗಳೂರು ನಮ್ಮ ಗುರಿ. ಇಡೀ ದೇಶ ಬೆಂಗಳೂರನ್ನು ಗಮನಿಸುತ್ತಿದೆ ಎಂದು ಮಾರ್ಮಿಕವಾಗಿ ನುಡಿದರು.

ಇದಲ್ಲದೆ, ಜಯನಗರ ಮಾರುಕಟ್ಟೆ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡಲಾಗುವುದು. ಅರ್ಧ ಕಟ್ಟಡ ನಿರ್ಮಾಣವಾಗಿದೆ. ಇನ್ನರ್ಧ ಕೆಲಸವಾಗಬೇಕು. ಶೀಘ್ರದಲ್ಲೇ ಈ ಕೆಲಸವನ್ನೂ ಮಾಡಲಾಗುವುದು. ಯಾವುದಾದರೂ ಒಂದು ಯೋಜನೆಯ ಅಡಿಯಲ್ಲಿ ಈ ಕೆಲಸ ಮಾಡಲಾಗುವುದು ಎಂದು ಹೇಳಿದರು.

Share with Friends
author avatar
Digital Desk