Crime NewsLatestಚಿಕ್ಕಬಳ್ಳಾಪುರ-Chikkaballapuraರಾಜ್ಯ-Karnataka

ಸೂರಜ್ ರೇವಣ್ಣ ಪ್ರಕರಣದ ಬಗ್ಗೆ ಕೇಳ್ಬೇಡಿ – ಹೆಚ್‌ಡಿಕೆ ಕಿಡಿ

ಚಿಕ್ಕಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda International Airport) ಮಾತನಾಡುತ್ತಾ, ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕಿಡಿಕಾರಿದ್ದಾರೆ. ಇಂತಹ ವಿಷಯಗಳನ್ನ ನನ್ನ ಬಳಿ ದಯವಿಟ್ಟು ಚರ್ಚೆ ಮಾಡಬೇಡಿ, ರಾಜ್ಯದ ಸಮಸ್ಯೆಗಳಿಗೆ ಸಂಬಂಧಪಟ್ಟ ವಿಚಾರಗಳನ್ನು ಮಾತ್ರ ಚರ್ಚೆ ಮಾಡಿ. ಅದರ ಅವಶ್ಯಕತೆ ಏನಿದೆ? ಕಾನೂನು ಇದೆ ಕಾನೂನಿನ ಅಡಿ ಎಲ್ಲವೂ ನಡೆಯಲಿದೆ. ಯಾಕೆ ಪ್ರಕರಣ ಬರ್ತಿದೆ ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಲೇಖಲಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ

https://youtu.be/RzHzla6ddIk?si=W8Lp8EyAZrXzbn0h

ಪ್ರಕರಣವೇನು?
ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆರೋಪ ಮಾಡಿದ ಯುವಕನ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯುವಕ ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ (Shivakumar) ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ -‌ ಇಂದು ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜೈಲು ಫಿಕ್ಸ್‌?

https://youtu.be/TUHqDSEB3jo?si=Szsxo0A4_iqVUsV_

5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್‌ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ನಡೆದಿದ್ದ ಪಟ್ಟಣಗೆರೆ ಶೆಡ್‌ಗೆ ಬೀಗ!

https://youtu.be/tpq1XrlUoU8?si=_pPpp010KPzN5sOJ
Share with Friends
author avatar
News Desk